ಬಹುಭಾಷೆಯಲ್ಲಿ ನಟಿಸಿ ಫೇಮಸ್ ಆದವರು ನಟಿ ಮೀರಾ ಜಾಸ್ಮಿನ್. ಹಲವು ಚಿತ್ರಗಳಲ್ಲಿ ಅಭಿನಯಿಸಿದ ಅನುಭವ ಅವರಿಗೆ ಇದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಪ್ರೇಕ್ಷಕರಿಗೆ ಅವರ ಹೆಸರು ಚಿರಪರಿಚಿತ.
ಕನ್ನಡದ ‘ಅರಸು’ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಜೊತೆ ಮೀರಾ ಜಾಸ್ಮಿನ್ ನಟಿಸಿದ್ದರು. ಆ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತ್ತು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಮೀರಾ ಜಾಸ್ಮಿನ್ ಅವರು ಹೆಚ್ಚು ಸಿನಿಮಾಗಳನ್ನು ಮಾಡುತ್ತಿಲ್ಲ. ಅವಕಾಶ ಕಡಿಮೆ ಆಯಿತೋ ಅಥವಾ ಅವರೇ ಚ್ಯೂಸಿ ಆಗಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಅವರನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ಬಗೆಬಗೆಯ ಫೋಟೋಗಳ ಮೂಲಕ ಮೀರಾ ಜಾಸ್ಮಿನ್ ಅವರು ಗಮನ ಸೆಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಜನರು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಮೀರಾ ಜಾಸ್ಮಿನ್ ಅವರು ಗ್ಲಾಮರಸ್ ಆಗಿ ಪೋಸ್ ನೀಡಿದ್ದನ್ನು ಕಂಡು ಪ್ಯಾನ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮತ್ತೆ ಅವರು ಸಿನಿಮಾಗಳಲ್ಲಿ ಸಕ್ರಿಯವಾಗಲಿ, ಹೆಚ್ಚು ಹೆಚ್ಚು ಚಿತ್ರಗಳಲ್ಲಿ ನಟಿಸಲಿ ಎಂದು ಅಭಿಮಾನಿಗಳು ಹಂಬಲ ವ್ಯಕ್ತಪಡಿಸುತ್ತಿದ್ದಾರೆ.