
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 90 ಮೀಟರ್ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದ ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್, ಕೇವಲ 6 ದಿನಗಳಲ್ಲಿ ಎರಡನೇ ಚಿನ್ನದ ಪದಕ ಗೆದ್ದಿದ್ದಾರೆ. ಈ ಹಿಂದೆ ನದೀಮ್ 90.18 ಮೀಟರ್ ದೂರ ಜಾವೆಲಿನ್ ಎಸೆದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ನೀರಜ್ ಚೋಪ್ರಾ ಅಲಭ್ಯತೆಯ ಲಾಭ ಮಡೆದ ನದೀಮ್ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ನದೀಮ್ 90 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಈ ದಾಖಲೆ ಮಾಡಿದ ದಕ್ಷಿಣ ಏಷ್ಯಾದ ಮೊದಲ ಆಟಗಾರ ಎನಿಸಿಕೊಂಡಿದ್ದರು. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿನ ಲಯವನ್ನು ಮುಂದುವರೆಸಿರುವ ನದೀಮ್ ಇಸ್ಲಾಮಿಕ್ ಸಾಲಿಡಾರಿಟಿ ಗೇಮ್ಸ್‌ನಲ್ಲಿ 88.55 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದಿದ್ದಾರೆ.



Published On - 4:48 pm, Sat, 13 August 22