
ಪುನೀತ್ ರಾಜ್ಕುಮಾರ್ ನಿಧನದ ನಂತರ ಎಲ್ಲಾ ಜವಾಬ್ದಾರಿಗಳನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಹೊತ್ತುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣಗಳತ್ತ ಗಮನ ಹರಿಸಿದ್ದಾರೆ.

ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ.

ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ.