ACT 2024: ಭಾರತ- ಚೀನಾ ನಡುವೆ ಫೈನಲ್ ಫೈಟ್; ಉಭಯರ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
Asian Champions Trophy 2024 Hockey Final: ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ಮುಖಾಮುಖಿಯ ಬಗ್ಗೆ ಮಾತನಾಡುವುದಾದರೆ.. ಭಾರತ ಮತ್ತು ಚೀನಾ 7ನೇ ಬಾರಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಆಡಿದ ಆರು ಪಂದ್ಯಗಳಲ್ಲಿ ಭಾರತ 5 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ ಏಕೈಕ ಪಂದ್ಯವನ್ನು ಮಾತ್ರ ಗೆದ್ದಿದೆ.
1 / 6
ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ರ ಫೈನಲ್ ಪಂದ್ಯ ಇಂದು ನಡೆಯಲ್ಲಿದ್ದು, ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಬಲಿಷ್ಠ ಭಾರತ ಹಾಕಿ ತಂಡ ಚೀನಾ ತಂಡವನ್ನು ಎದುರಿಸುತ್ತಿದೆ. ಈ ಹಾಕಿ ಟೂರ್ನಿಯಲ್ಲಿ ಚೀನಾ ಫೈನಲ್‌ಗೆ ಲಗ್ಗೆ ಇಟ್ಟಿರುವುದು ಇದೇ ಮೊದಲ ಬಾರಿಯಾದರೆ, ಇತ್ತ ಈ ಟೂರ್ನಿಯಲ್ಲಿ ಭಾರತ ಆರನೇ ಬಾರಿಗೆ ಫೈನಲ್ ಆಡಲಿದೆ.
2 / 6
ಭಾರತ ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 4-1 ಗೋಲುಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಇತ್ತ ಚೀನಾ ತಂಡ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಸೋಲಿಸಿ ಪ್ರಶಸ್ತಿ ಸುತ್ತಿಗೆ ಟಿಕೆಟ್ ಪಡೆದುಕೊಂಡಿದೆ. ಭಾರತ ಈ ಹಿಂದೆ 4 ಬಾರಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದಿದೆ. ಹೀಗಿರುವಾಗ ಈ ಬಾರಿ ದಾಖಲೆಯ 5ನೇ ಬಾರಿ ಪ್ರಶಸ್ತಿ ಗೆಲ್ಲುವತ್ತ ದೃಷ್ಟಿ ನೆಟ್ಟಿದೆ.
3 / 6
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿರುವ ಕಾರಣ ತನ್ನ ಚಾಂಪಿಯನ್ ಕಿರೀಟವನ್ನು ಉಳಿಸಿಕೊಳ್ಳುವ ಜವಬ್ದಾರಿ ಭಾರತದ ಮೇಲಿದ್ದರೆ, ಇತ್ತ ಚೊಚ್ಚಲ ಫೈನಲ್ ಆಡುತ್ತಿರುವ ಚೀನಾ ತಂಡಕ್ಕು ಕೂಡ ಈ ಪಂದ್ಯ ಮಹತ್ವದ್ದಾಗಿದೆ. ಆದರೆ ಗ್ರೂಪ್ ಹಂತದಲ್ಲಿ ಚೀನಾವನ್ನು 3-0 ಗೋಲುಗಳಿಂದ ಸೋಲಿಸಿರುವ ಟೀಂ ಇಂಡಿಯಾದ ಆತ್ಮವಿಶ್ವಾಸ ಹೆಚ್ಚಿದೆ.
4 / 6
ಇನ್ನು ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ಮುಖಾಮುಖಿಯ ಬಗ್ಗೆ ಮಾತನಾಡುವುದಾದರೆ.. ಭಾರತ ಮತ್ತು ಚೀನಾ 7ನೇ ಬಾರಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಆಡಿದ ಆರು ಪಂದ್ಯಗಳಲ್ಲಿ ಭಾರತ 5 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ ಏಕೈಕ ಪಂದ್ಯವನ್ನು ಮಾತ್ರ ಗೆದ್ದಿದೆ.
5 / 6
ಒಟ್ಟಾರೆ ಹಾಕಿ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, ಭಾರತ ಮತ್ತು ಚೀನಾ 23 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 17 ಪಂದ್ಯಗಳನ್ನು ಗೆದ್ದಿದ್ದರೆ, ಚೀನಾ 3 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ 3 ಪಂದ್ಯಗಳು ಡ್ರಾ ಆಗಿವೆ. ಅಂಕಿಅಂಶಗಳಲ್ಲಿ ಚೀನಾದ ಮೇಲೆ ಭಾರತವೇ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದ್ದು, ಭಾರತ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದೆ ಎಂಬುದು ಅಲ್ಲರ ಅಭಿಪ್ರಾಯವಾಗಿದೆ.
6 / 6
ಇದಕ್ಕೆ ಪೂರಕವಾಗಿ ಟೂರ್ನಿಯಲ್ಲಿ ಭಾರತ ತಂಡ ಇದುವರೆಗೆ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಭಾರತ ಗುಂಪು ಹಂತದಲ್ಲಿ ಚೀನಾ, ಜಪಾನ್, ಮಲೇಷ್ಯಾ, ಕೊರಿಯಾ ಮತ್ತು ಪಾಕಿಸ್ತಾನವನ್ನು ಸೋಲಿಸಿತ್ತು. ಆ ಬಳಿಕ ಸೆಮಿಫೈನಲ್‌ನಲ್ಲಿ ಕೊರಿಯಾವನ್ನು ಮತ್ತೆ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿರುವ ಭಾರತ, ಪ್ರಶಸ್ತಿ ಪಂದ್ಯದಲ್ಲಿ ಚೀನಾವನ್ನು ಸೋಲಿಸಿ ಟ್ರೋಫಿಯನ್ನು ವಶಪಡಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.