AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್ 2026: ಜನ್ಮ ದಿನದಂದೇ ಬಂಗಾರ ಗೆದ್ದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್

ಲೊವ್ಲಿನಾ ಬೊರ್ಗೊಹೈನ್ ಏಷ್ಯನ್ ಗೇಮ್ಸ್ ಮಹಿಳೆಯರ 75 ಕೆಜಿ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ 13ನೇ ಚಿನ್ನ ತಂದಿದ್ದಾರೆ. ಹುಟ್ಟುಹಬ್ಬದಂದೇ ಈ ಪದಕ ಗಳಿಸಿದ್ದು ವಿಶೇಷ. ಮೇರಿ ಕೋಮ್ ನಂತರ ಚಿನ್ನ ಗೆದ್ದ ಎರಡನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಅವರ ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು.

ಪೃಥ್ವಿಶಂಕರ
|

Updated on:Oct 02, 2026 | 3:38 PM

Share
ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನದಂದು ಭಾರತಕ್ಕೆ 13ನೇ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ ಬಾಕ್ಸಿಂಗ್‌ನ 75 ಕೆಜಿ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಲೊವ್ಲಿನಾ ಬೊರ್ಗೊಹೈನ್ ಬಂಗಾರಕ್ಕೆ ಮುತ್ತಿಕ್ಕಿದ್ದಾರೆ.  ಲೊವ್ಲಿನಾ ಬೊರ್ಗೊಹೈನ್ ತಮ್ಮ 29 ನೇ ಹುಟ್ಟುಹಬ್ಬದಂದು ಈ ಚಿನ್ನದ ಪದಕ ಗೆದ್ದಿರುವುದು ಅವರಿಗೆ ಮತ್ತಷ್ಟು ವಿಶೇಷವಾಗಿದೆ(PC-PTI).

1 / 5
ಶುಕ್ರವಾರ ನಿಶಿಯೋ ಜಿಮ್ನಾಷಿಯಂನಲ್ಲಿ ನಡೆದ ಮಹಿಳೆಯರ 75 ಕೆಜಿ ವಿಭಾಗದ ಫೈನಲ್‌ನಲ್ಲಿ ಚೀನಾದ ಜಿ ಬಾವೊ ಅವರನ್ನು ಸೋಲಿಸಿದ ಭಾರತೀಯ ಸ್ಟಾರ್ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಏಷ್ಯನ್ ಕ್ರೀಡಾಕೂಟದಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಗೆದ್ದರು(PC-PTI).

2 / 5
ಇದರೊಂದಿಗೆ ಅಥ್ಲೀಟ್ ಮೇರಿ ಕೋಮ್ ನಂತರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಎರಡನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಗೆಲುವಿನೊಂದಿಗೆ, 2014 ರಲ್ಲಿ ಮೇರಿ ಕೋಮ್ ನಂತರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಮಹಿಳಾ ಎಂಬ ದಾಖಲೆಯೂ ಬಾಕ್ಸರ್ ಲೊವ್ಲಿನಾ ಪಾಲಾಗಿದೆ(PC-PTI).

3 / 5
 ತೀವ್ರ ಪೈಪೋಟಿಯ ಈ ಹೋರಾಟದಲ್ಲಿ ಲೊವ್ಲಿನಾ, ಚೀನಾದ ಜಿ ಬಾವೊ ಅವರನ್ನು 5-0 ಅಂತರದಿಂದ ಸೋಲಿಸಿದರು. ಈ ಹಿಂದೆ ಕಝಾಕಿಸ್ತಾನದ ನಟಾಲಿಯಾ ಬೊಗ್ಡಾನೋವಾ ಅವರನ್ನು ಸೋಲಿಸಿ ಫೈನಲ್ ತಲುಪಿದ್ದ ಲೊವ್ಲಿನಾ, ಅಂತಿಮವಾಗಿ ಈ ಕಾಂಟಿನೆಂಟಲ್ ಈವೆಂಟ್‌ನಲ್ಲಿ ಚಿನ್ನವನ್ನು ತನ್ನದಾಗಿಸಿಕೊಂಡಿದ್ದಾರೆ. ಇನ್ನು 2022 ರಲ್ಲಿ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಲೊವ್ಲಿನಾ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು(PC-PTI).

4 / 5
28 ವರ್ಷದ ಲೊವ್ಲಿನಾ ಬೊರ್ಗೊಹೈನ್ ಈಗಾಗಲೇ ಒಲಿಂಪಿಕ್ ಕ್ರೀಡಾಕೂಟ, ವಿಶ್ವ ಚಾಂಪಿಯನ್‌ಶಿಪ್, ಏಷ್ಯನ್ ಕ್ರೀಡಾಕೂಟ ಮತ್ತು ಏಷ್ಯನ್ ಚಾಂಪಿಯನ್‌ಶಿಪ್‌ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಇದೀಗ ಜಪಾನ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ತಮ್ಮ ವೃತ್ತಿಜೀವನಕ್ಕೆ ಹೊಸ ಆಯಾಮ ನೀಡಿದ್ದಾರೆ(PC-PTI).

5 / 5

Published On - 3:33 pm, Fri, 2 October 26

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ

‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ

'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!

ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ

ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?

ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ

ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್

ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್

ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ