AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಈ ದಿನದಂದು ಭಾರತ- ಪಾಕ್ ಮುಖಾಮುಖಿ

Men’s Hockey Asian Champions Trophy 2024: ಚೀನಾದಲ್ಲಿ ನಡೆಯಲಿರುವ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಅದರಂತೆ ಸೆಪ್ಟೆಂಬರ್ 8 ರಿಂದ ಆರಂಭವಾಗಲಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಪ್ಟೆಂಬರ್ 17 ರಂದು ಮುಕ್ತಾಯಗೊಳ್ಳಲಿದೆ. ಈ ಬಾರಿಯ ಟೂರ್ನಿಯಲ್ಲಿ ಏಷ್ಯಾದ ಒಟ್ಟು 6 ತಂಡಗಳು ಭಾಗವಹಿಸುತ್ತಿವೆ.

ಪೃಥ್ವಿಶಂಕರ
|

Updated on:Aug 12, 2024 | 5:59 PM

Share
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸ್ಪೇನ್ ತಂಡವನ್ನು ಮಣಿಸಿದ ಭಾರತ ಹಾಕಿ ತಂಡ ಕಂಚಿನ ಪದಕವನ್ನು ಗೆದ್ದುಕೊಂಡಿತು. ಇದರೊಂದಿಗೆ ಸತತ ಎರಡು ಒಲಿಂಪಿಕ್ಸ್​ಗಳಲ್ಲಿ ಪದಕ ಗೆದ್ದ ಸಾಧನೆಯನ್ನು ಭಾರತ ಹಾಕಿ ತಂಡ ಮಾಡಿತ್ತು. ಇದೀಗ ಒಲಿಂಪಿಕ್ಸ್​ನಿಂದ ದೇಶಕ್ಕೆ ವಾಪಸ್ಸಾಗಿರುವ ಭಾರತ ಹಾಕಿ ತಂಡ ಮುಂದಿನ ತಿಂಗಳಿಂದ ಮತ್ತೆ ಅಖಾಡಕ್ಕಿಳಿಯಲು ತಯಾರಿ ನಡೆಸುತ್ತಿದೆ.

1 / 7
ವಾಸ್ತವವಾಗಿ ಚೀನಾದಲ್ಲಿ ನಡೆಯಲಿರುವ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಅದರಂತೆ ಸೆಪ್ಟೆಂಬರ್ 8 ರಿಂದ ಆರಂಭವಾಗಲಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಪ್ಟೆಂಬರ್ 17 ರಂದು ಮುಕ್ತಾಯಗೊಳ್ಳಲಿದೆ. ಈ ಬಾರಿಯ ಟೂರ್ನಿಯಲ್ಲಿ ಏಷ್ಯಾದ ಒಟ್ಟು 6 ತಂಡಗಳು ಭಾಗವಹಿಸುತ್ತಿವೆ.

2 / 7
ಮೇಲೆ ಹೇಳಿದಂತೆ ಈ ಟೂರ್ನಿಯಲ್ಲಿ 6 ತಂಡಗಳು ಬಾಗವಹಿಸುತ್ತಿದ್ದು, ಈ 6 ತಂಡಗಳ ಪೈಕಿ ಭಾರತ, ಪಾಕಿಸ್ತಾನ, ಆತಿಥೇಯ ಚೀನಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ಮಲೇಷ್ಯಾ ತಂಡಗಳು ಸೇರಿವೆ. ಸೆಪ್ಟೆಂಬರ್ 8 ರಿಂದ ಈ ಟೂರ್ನಿ ಆರಂಭವಾದರೂ, ಟೂರ್ನಿಯ ಹೈವೋಲ್ಟೇಜ್ ಪಂದ್ಯ ಭಾರತ ಹಾಗೂ ಪಾಕಿಸ್ತಾನದ ನಡುವೆ  ಸೆಪ್ಟೆಂಬರ್ 14 ರಂದು ನಡೆಯಲಿದೆ.

3 / 7
ಇನ್ನು ವೇಳಾಪಟ್ಟಿಯ ಪ್ರಕಾರ ಚೀನಾದ ಹುಲುನ್‌ಬುಯರ್‌ನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದ್ದು, ಸೆಪ್ಟೆಂಬರ್ 8 ರಂದು ದಕ್ಷಿಣ ಕೊರಿಯಾ ಮತ್ತು ಜಪಾನ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಅದೇ ದಿನ ಭಾರತ ಹಾಕಿ ತಂಡ ಚೀನಾ ತಂಡವನ್ನು ಎದುರಿಸಲಿದೆ. ಆ ಬಳಿಕ ಭಾರತ ತಂಡ ಸೆಪ್ಟೆಂಬರ್ 9 ರಂದು ಜಪಾನ್, ಸೆಪ್ಟೆಂಬರ್ 11 ರಂದು ಮಲೇಷ್ಯಾ, ಸೆಪ್ಟೆಂಬರ್ 12 ರಂದು ದಕ್ಷಿಣ ಕೊರಿಯಾ ಮತ್ತು ನಂತರ ಸೆಪ್ಟೆಂಬರ್ 14 ರಂದು ಪಾಕಿಸ್ತಾನವನ್ನು ಎದುರಿಸಲಿದೆ.

4 / 7
ಲೀಗ್ ಹಂತದಲ್ಲಿ ಎಲ್ಲಾ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ಲೀಗ್ ಸುತ್ತಿನ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 4 ಸ್ಥಾನ ಪಡೆಯುವ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿವೆ. ಸೆಮಿಫೈನಲ್​ನಲ್ಲಿ ಗೆದ್ದ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಲ್ಲಿದೆ.

5 / 7
ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಅದ್ಭುತ ಪ್ರದರ್ಶನ ನೀಡಿ ಕಂಚಿನ ಪದಕ ಗೆದ್ದಿತ್ತು. ಇದಲ್ಲದೆ ಈ ಟೂರ್ನಿಯಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿರುವುದರಿಂದ ತಂಡ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಸಲುವಾಗಿ ಅಖಾಡಕ್ಕಿಳಿಯಲಿದೆ.

6 / 7
ಇದಕ್ಕೆ ಪೂರಕವಾಗಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ 6 ತಂಡಗಳ ಪೈಕಿ ಭಾರತ ಒಂದೇ ಒಲಿಂಪಿಕ್ಸ್​ಗೆ ಅರ್ಹತೆ ಪಡೆದಿತ್ತು. ಹೀಗಾಗಿ ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಎಲ್ಲಾ ಸಾಧ್ಯತೆಗಳಿವೆ. ಇನ್ನು ಈ ಟೂರ್ನಿಯಲ್ಲಿ ಭಾರತ ಇದುವರೆಗೆ ನಾಲ್ಕು ಬಾರಿ ಚಾಂಪಿಯನ್ ಆಗಿದ್ದು, ಇದೀಗ ಪ್ಯಾರಿಸ್ ಒಲಿಂಪಿಕ್ಸ್ ಬಳಿಕ ಭಾರತ ತಂಡ ಮುಂದಿನ ಟೂರ್ನಿಯಲ್ಲಿ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

7 / 7

Published On - 5:57 pm, Mon, 12 August 24

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ