- Kannada News Photo gallery Atal Bihari Vajpayee death anniversary: President Droupadi Murmu PM Narendra Modi pay tributes at Sadaiv Atal
Atal Bihari Vajpayee Death Anniversary: ಇಂದು ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ; ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಇತರೆ ಗಣ್ಯರಿಂದ ಶ್ರದ್ಧಾಂಜಲಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.
Updated on: Aug 16, 2022 | 11:23 AM

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಇತರ ನಾಯಕರು ವಾಜಪೇಯಿ ಅವರ ಸ್ಮಾರಕವಾದ 'ಸದೈವ್ ಅಟಲ್'ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

1998-2004ರ ನಡುವೆ 6 ವರ್ಷಗಳ ಕಾಲ ಪ್ರಧಾನಿಯಾಗಿದ್ದ ವಾಜಪೇಯಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತರು.

ಅಟಲ್ ಬಿಹಾರಿ ವಾಜಪೇಯಿ 2018ರಲ್ಲಿ 93ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು.

ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಮನ ಸಲ್ಲಿಸಿದರು.

ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಮನ ಸಲ್ಲಿಸಿದರು.

ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಮನ ಸಲ್ಲಿಸಿದರು.




