Athiya Shetty Marriage: ಕೆಎಲ್ ರಾಹುಲ್ ಜತೆ ಅಥಿಯಾ ಶೆಟ್ಟಿ ವಿವಾಹ; ಸುನೀಲ್ ಶೆಟ್ಟಿ ಪುತ್ರಿಗೆ ಕಂಕಣ ಭಾಗ್ಯ
Athiya Shetty KL Rahul Wedding: ಬಹುಕಾಲದಿಂದ ಪ್ರೀತಿಸುತ್ತಿದ್ದ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅವರು ಈಗ ಹಸೆಮಣೆ ಏರುತ್ತಿದ್ದಾರೆ. ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ವಿವಾಹ ನಡೆಯುತ್ತಿದೆ.
1 / 5
ಖ್ಯಾತ ನಟ ಸುನೀಲ್ ಶೆಟ್ಟಿ ಅವರ ಮುದ್ದಿನ ಪುತ್ರಿ ಅಥಿಯಾ ಶೆಟ್ಟಿ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಅದ್ದೂರಿಯಾಗಿ ವಿವಾಹ ಸಮಾರಂಭ ನಡೆಯುತ್ತಿದೆ. ಅಥಿಯಾಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.
2 / 5
ಕ್ರಿಕೆಟರ್ ಕೆಎಲ್ ರಾಹುಲ್ ಜೊತೆಗೆ ಅಥಿಯಾ ಶೆಟ್ಟಿ ಅವರು ಹಸೆಮಣೆ ಏರುತ್ತಿದ್ದಾರೆ. ಖಂಡಾಲದಲ್ಲಿ ಇರುವ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ನಲ್ಲಿ ಮದುವೆ ಮಾಡಲಾಗುತ್ತಿದೆ. ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿದೆ.
3 / 5
ಜನವರಿ 21ರಿಂದಲೇ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಜನವರಿ 23ರಂದು ಈ ಜೋಡಿ ಹಸೆಮಣೆ ಏರಲಿದೆ. ಆಪ್ತರು ಮತ್ತು ಕುಟುಂಬದವರು ಈ ವಿವಾಹಕ್ಕೆ ಸಾಕ್ಷಿ ಆಗಲಿದ್ದಾರೆ.
4 / 5
2015ರಲ್ಲಿ ಅಥಿಯಾ ಶೆಟ್ಟಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ನಟಿಸಿದ ಮೊದಲ ಸಿನಿಮಾ ‘ಹೀರೋ’. ಆದರೆ ಆ ಚಿತ್ರದಿಂದ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ನಂತರದ ದಿನಗಳಲ್ಲಿ ಅವರು ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ.
5 / 5
2018ರಿಂದ ಈಚೆಗೆ ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಪ್ರೀತಿಸುತ್ತಿದ್ದಾರೆ. ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸಿವೆ. ಈಗ ಈ ಸೆಲೆಬ್ರಿಟಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದೆ.