AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿತಪ್ಪಿಯೂ ಕಲ್ಲಂಗಡಿ ಹಣ್ಣಿಗೆ ಉಪ್ಪು ಸೇರಿಸಿ ತಿನ್ನಬೇಡಿ!

ಕಲ್ಲಂಗಡಿ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಯಾವ ಆಹಾರಗಳ ಜೊತೆ ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 21, 2025 | 10:23 AM

Share
ಕಲ್ಲಂಗಡಿ ಆರೋಗ್ಯಕ್ಕೆ ಒಳ್ಳೆಯದು. ಆದರೆ ಈ ಹಣ್ಣನ್ನು ಕೆಲವು ಆಹಾರಗಳ ಜೊತೆಯಲ್ಲಿ ಸೇವಿಸಿದರೆ, ಜೀರ್ಣಕಾರಿ ಸಮಸ್ಯೆಗಳು, ಉಬ್ಬರ, ಅಜೀರ್ಣ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಕಲ್ಲಂಗಡಿ ಹಣ್ಣನ್ನು ತಿಂದ ತಕ್ಷಣ ಕೆಲವು ಆಹಾರಗಳನ್ನು ತಿನ್ನುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

1 / 5
ಕಲ್ಲಂಗಡಿ ತಿಂದ ನಂತರ ಹಾಲು ಕುಡಿಯುವುದರಿಂದ ಅಜೀರ್ಣವಾಗುತ್ತದೆ. ಇದು ಹೊಟ್ಟೆ ಉಬ್ಬರ, ಗ್ಯಾಸ್ ಮತ್ತು ಅಸ್ವಾಭಾವಿಕ ಹೊಟ್ಟೆ ನೋವಿಗೆ ಕಾರಣವಾಗಬಹುದು. ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ, ಇದು ಹಾಲಿನಲ್ಲಿರುವ ಪ್ರೋಟೀನ್ಗಳೊಂದಿಗೆ ಸಂಯೋಜನೆಗೊಂಡು ದೇಹದಲ್ಲಿ ಅಸಮತೋಲನವನ್ನುಉಂಟುಮಾಡುತ್ತದೆ.

ಕಲ್ಲಂಗಡಿ ತಿಂದ ನಂತರ ಹಾಲು ಕುಡಿಯುವುದರಿಂದ ಅಜೀರ್ಣವಾಗುತ್ತದೆ. ಇದು ಹೊಟ್ಟೆ ಉಬ್ಬರ, ಗ್ಯಾಸ್ ಮತ್ತು ಅಸ್ವಾಭಾವಿಕ ಹೊಟ್ಟೆ ನೋವಿಗೆ ಕಾರಣವಾಗಬಹುದು. ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಅಧಿಕವಾಗಿರುವುದರಿಂದ, ಇದು ಹಾಲಿನಲ್ಲಿರುವ ಪ್ರೋಟೀನ್ಗಳೊಂದಿಗೆ ಸಂಯೋಜನೆಗೊಂಡು ದೇಹದಲ್ಲಿ ಅಸಮತೋಲನವನ್ನುಉಂಟುಮಾಡುತ್ತದೆ. (3)

2 / 5
ಕಲ್ಲಂಗಡಿ ತಿಂದ ತಕ್ಷಣ ಪ್ರೋಟೀನ್ ಅಧಿಕವಾಗಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ಕಲ್ಲಂಗಡಿ ಜೊತೆಗೆ ಮಾಂಸ ಮತ್ತು ಮೀನುಗಳಂತಹ ಪ್ರೋಟೀನ್ ಭರಿತ ಆಹಾರಗಳನ್ನು ಸೇವಿಸಬೇಡಿ.

3 / 5
ಮೊಟ್ಟೆ ಮತ್ತು ಕಲ್ಲಂಗಡಿಯನ್ನು ಒಟ್ಟಿಗೆ ತಿನ್ನಬಾರದು. ಮೊಟ್ಟೆಗಳು ಒಮೆಗಾ -3 ಮತ್ತು ಪ್ರೋಟೀನ್ ಗಳನ್ನು ಹೊಂದಿರುತ್ತವೆ. ಹಾಗಾಗಿ ಇವೆರಡನ್ನು ಒಟ್ಟಾಗಿ ಸೇವನೆ ಮಾಡಿದಾಗ ಅಸಮತೋಲನಕ್ಕೆ ಕಾರಣವಾಗಬಹುದು. ಇದು ಜೀರ್ಣಕಾರಿ ಸಮಸ್ಯೆಗಳು, ಮಲಬದ್ಧತೆ, ಉಬ್ಬರ, ಗ್ಯಾಸ್ ಇತ್ಯಾದಿಗಳಿಗೆ ಕಾರಣವಾಗಬಹುದು.

4 / 5
ಕೆಲವರು ಕಲ್ಲಂಗಡಿ ಹಣ್ಣಿನ ರುಚಿ ಹೆಚ್ಚಿಸಲು ಉಪ್ಪನ್ನು ಸಿಂಪಡಿಸಿ ಸೇವನೆ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದಲ್ಲದೆ ಈ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹಾಗಾಗಿ  ಬೆಳಿಗ್ಗೆ ಅಥವಾ ಮಧ್ಯಾಹ್ನ ಕಲ್ಲಂಗಡಿ ತಿನ್ನುವುದು ಉತ್ತಮ. ಕಲ್ಲಂಗಡಿ ಹಣ್ಣನ್ನು ಫ್ರಿಜ್ ನಲ್ಲಿ ಇಟ್ಟು ತಿನ್ನುವುದು ಒಳ್ಳೆಯದಲ್ಲ. ಏಕೆಂದರೆ ಕಲ್ಲಂಗಡಿ ಪೋಷಕಾಂಶಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

5 / 5
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ