- TV9 Kannada Photo gallery Kannada Cinema | Award winning Kannada movie Pinki Elli to be released in theatres on 2nd June mdn
Pinki Elli: ಜೂನ್ 2ರಂದು ರಿಲೀಸ್ ಆಗಲಿದೆ ‘ಪಿಂಕಿ ಎಲ್ಲಿ’ ಚಿತ್ರ; ಈ ಸಿನಿಮಾದಲ್ಲಿದೆ ಹಲವು ವಿಶೇಷತೆ
Akshatha Pandavapura: ಅಕ್ಷತಾ ಪಾಂಡವಪುರ ಅವರು ‘ಪಿಂಕಿ ಎಲ್ಲಿ’ ಚಿತ್ರದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಕೃಷ್ಣೇಗೌಡ ನಿರ್ಮಾಣ ಮಾಡಿದ್ದು, ಪೃಥ್ವಿ ಕೋಣನೂರು ನಿರ್ದೇಶಿಸಿದ್ದಾರೆ.
Updated on: May 25, 2023 | 12:15 PM

ಹಲವಾರು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ಪ್ರಶಸ್ತಿಗಳಿಗೆ ಭಾಜನವಾಗಿರುವ ‘ಪಿಂಕಿ ಎಲ್ಲಿ?’ ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ಕೃಷ್ಣೇಗೌಡ ಅವರು ನಿರ್ಮಾಣ ಮಾಡಿ, ಪೃಥ್ವಿ ಕೋಣನೂರು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಜೂನ್ 2ರಂದು ತೆರೆಗೆ ಬರಲಿದೆ.

ಸತ್ಯ ಘಟನೆಯನ್ನು ಆಧರಿಸಿ ಸಿದ್ಧವಾದ ಈ ಸಿನಿಮಾ ಭಿನ್ನ ಶೈಲಿಯಲ್ಲಿದೆ. ಕಣ್ಣಂಚನ್ನು ತೇವಗೊಳಿಸುವ, ಪ್ರೇಕ್ಷಕರನ್ನು ಆಲೋಚನೆಗೆ ಹಚ್ಚುವ ಈ ಸಿನಿಮಾ ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಮನಸು ಮುರಿದ ದಂಪತಿ ಮತ್ತು ಪುಟ್ಟ ಮಗುವಿನ ಸುತ್ತ ಈ ಚಿತ್ರದ ಕತೆ ಸಾಗುತ್ತದೆ.

ಸಿನಿಮೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಬಾಚಿಕೊಂಡ ಸಿನಿಮಾಗಳು ಕಮರ್ಶಿಯಲ್ ಸಿನಿಮಾಗಳಿಗೆ ಪೈಪೋಟಿ ಕೊಟ್ಟು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗೋದು ವಿರಳ. ಆದರೆ ನಿರ್ಮಾಪಕರಾದ ಕೃಷ್ಣೇಗೌಡ ಅವರು ಅದನ್ನು ಸಾಧ್ಯವಾಗಿಸುತ್ತಿದ್ದಾರೆ. ಚಿತ್ರಮಂದಿರದಲ್ಲಿ ಜನರು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಈ ಸಿನಿಮಾದ ಪ್ರಧಾನ ಪಾತ್ರವನ್ನು ಪ್ರತಿಭಾನ್ವಿತ ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ನಿಭಾಯಿಸಿದ್ದಾರೆ. ಸವಾಲಿನಿಂದ ಕೂಡಿದ ಈ ಪಾತ್ರವನ್ನು ಅವರು ಲೀಲಾಜಾಲವಾಗಿ ನಿರ್ವಹಿಸಿದ್ದಾರೆ. ಆ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿಕೊಂಡಿದ್ದಾರೆ. ಪ್ರಶಸ್ತಿಗೂ ಭಾಜನರಾಗಿದ್ದಾರೆ.

ದೀಪಕ್ ಸುಬ್ರಮಣ್ಯ, ಪೃಥ್ವಿ ಕೋಣನೂರು ಮುಂತಾದವರ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ವ್ಯವಹಾರಿಕವಾಗಿಯೂ ಈ ಚಿತ್ರ ಗೆಲುವು ಕಾಣುತ್ತಿದೆ. ಈಗಾಗಲೇ ರಿಮೇಕ್ ಹಕ್ಕು ಮತ್ತು ಡಬ್ಬಿಂಗ್ ಹಕ್ಕುಗಳಿಗೆ ಬೇಡಿಕೆ ಬಂದಿದೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



