ಅಯೋಧ್ಯೆ ರಾಮ ಮಂದಿರ ಉದ್ಘಾಟನೆ; ಚಿತ್ರದುರ್ಗದಲ್ಲಿ ರಾಮನ ಟ್ಯಾಟೂ ಟ್ರೆಂಡ್
ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಲ್ಲೂ ರಾಮನ ಕಟೌಟ್, ಕೇಸರಿ ಧ್ವಜಗಳು ಹಾರಾಡುತ್ತಿವೆ. ಹಲವೆಡೆ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.
Updated on: Jan 21, 2024 | 2:46 PM

ಕೋಟ್ಯಂತರ ಹಿಂದೂಗಳ ಐದು ದಶಕಗಳ ಕನಸು ಈಡೇರಲು ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ರಾಮ ಮಂದಿರ ನಾಳೆ ಲೋಕಾರ್ಪಣೆಯಾಗಲಿದ್ದು, ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. (ಫೋಟೋ: Social Media/File Photo)

ಈ ನಡುವೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಭು ಶ್ರೀರಾಮನ ಟ್ಯಾಟೂ ಟ್ರೆಂಡ್ ಶುರುವಾಗಿದೆ.

ಚಿತ್ರದುರ್ಗದಲ್ಲಿ ಯುವಕರು ಅಯೋಧ್ಯೆ ರಾಮ ಮಂದಿರ, ರಾಮ-ಹನುಮಂತನ ಟ್ಯಾಟೂ ಹಾಕಿಸುತ್ತಿದ್ದಾರೆ.

ಚಿತ್ರದುರ್ಗದ ಕಲಾವಿದ ಮಣಿ ಎಂಬವರು ಯುವಕರಿಗೆ ಟ್ಯಾಟೂ ಹಾಕುತ್ತಿದ್ದಾರೆ.

ಕೈ ಮತ್ತು ಎದೆ ಮೇಲೆ ಟ್ಯಾಟೂ ಹಾಕಿಸಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ 150ಕ್ಕೂ ಹೆಚ್ಚು ಮಂದಿ ಟ್ಯಾಟೂ ಹಾಕಿಸಿದ್ದಾರೆ.

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
Read More



