ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.
Published On - 3:42 pm, Mon, 28 November 22