
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಯೋಜನೆಯ ಕಾಮಗಾರಿ ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು-ಮಾಲೂರು ಸೆಕ್ಷನ್‌ನ ಕೆಲಸಗಳು ಹೇಗೆ ನಡೆಯುತ್ತಿವೆ? ಎಂದು ಸಚಿವ ನಿತಿನ್ ಗಡ್ಕರಿ ಅವರು ವಿವರ ನೀಡಿದ್ದು, ಯೋಜನೆಯ ಇತರ ಮಾಹಿತಿಯನ್ನು ಫೋಟೋಗಳ ಸಮೇತ ಹಂಚಿಕೊಂಡಿದ್ದಾರೆ.

ಪ್ರಸ್ತುತ 1160 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಮತ್ತು ಮಾಲೂರು ನಡುವಿನ ಕಾಮಗಾರಿ ನಡೆಯುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಭಾರತ್ ಮಾಲಾ ಪರಿಯೋಜನೆ ಅಡಿ ಕೈಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ಮೂರು ರಾಜ್ಯಗಳಲ್ಲಿ ಹಾದು ಹೋಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ದೇಶಾದ್ಯಂತ ತಡೆರಹಿತ ಮತ್ತು ಪರಿಸರ ಪೂರಕವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಬದ್ಧರಾಗಿದ್ದೇವೆ ಎಂದು ನಿತಿನ್ ಗಡ್ಕರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವಿನ ಪ್ರಯಾಣದ ಅವಧಿ ಕೇವಲ 3 ಗಂಟೆ ಎಂದು ಕೇಂದ್ರ ಸರ್ಕಾರ ಹೇಳಿದೆ.
Published On - 9:30 am, Tue, 25 July 23