AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ!

ಬೆಂಗಳೂರು, ಮೇ 19: ಶನಿವಾರ ರಾತ್ರಿ ಸುರಿದ ಭಾರಿ ಮಳೆಯ ಆಘಾತದಿಂದ ಚೇತರಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದ ಬೆಂಗಳೂರಿಗೆ ಭಾನುವಾರ ರಾತ್ರಿ ಮತ್ತೆ ವರುಣಾಘಾತವಾಗಿದೆ. ಶನಿವಾರದ ಮಳೆಗೆ ಕಾವೇರಿ ನಗರದ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುವಂತಾಗಿತ್ತು. ಸಾಯಿ ಲೇಔಟ್​​ಗೆ ಜಲ ಕಂಟಕ ಎದುರಾಗಿತ್ತು. ಭಾನುವಾರ ರಾತ್ರಿ ಕೂಡ ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ವಿಜಯನಗರ, ಚಾಮರಾಜಪೇಟೆ ಸೇರಿದಂತೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ವರ್ಷಧಾರೆ ಸುರಿದಿದೆ.

Ganapathi Sharma
|

Updated on: May 19, 2025 | 7:39 AM

ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಅನೇಕ ಕಡೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿರುವ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ. ಭಾನುವಾರ ರಾತ್ರಿ ಸುಮಾರು 8 ರಿಂದ 9 ತಾಸು ಮಳೆಯಾಗಿದೆ.

1 / 6
ಭಾನುವಾರ ತಡರಾತ್ರಿ 1.30 ರ ನಂತರ ಪ್ರಾರಂಭವಾದ ಮಳೆ ಮುಂಜಾನೆ ವರೆಗೂ ಸುರಿದಿದೆ. ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.

2 / 6
ತಡರಾತ್ರಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಸಿಟಿ ಮಾರ್ಕೆಟ್, ದಕ್ಷಿಣ ಮತ್ತು ನೈಋತ್ಯ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮುಂಜಾನೆಯೇ ಸಂಚಾರಕ್ಕೆ ಅಡಚಣೆಯಾಯಿತು.

3 / 6
ರಾತ್ರಿ ಸುರಿದ ಮಳೆ ಬ್ರ್ಯಾಂಡ್ ಬೆಂಗಳೂರಿನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ರಾಜಧಾನಿಯ ಹಲವೆಡೆ ಮಳೆಗೆ ಅವಾಂತರಗಳ ಸರಮಾಲೆಯೇ ಸೃಷ್ಟಿಯಾಗಿವೆ. ಪ್ರತಿ  ಬಾರಿ ಮಳೆ ಬಂದಾಗಲೂ ಕೆರೆಯಂತಾಗುವ ಸಾಯಿಲೇಔಟ್​ನಲ್ಲಿ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.

4 / 6
ಗೊರಗುಂಟೆಪಾಳ್ಯ, ಹೆಬ್ಬಾಳ ಸುತ್ತಮುತ್ತ ರಸ್ತೆಗಳಲ್ಲಿ ಆಳವಾದ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಜೆಸಿ ರಸ್ತೆಯಲ್ಲಿಯೂ ಹೊಂಡಗುಂಡಿಗಳಿಂದಾಗಿ ವಾಹನ ಸಂಚಾರ ನರಕವಾಗಿದೆ. ಮಳೆಯ ಅಬ್ಬರಕ್ಕೆ ಬಿಬಿಎಂಪಿಯ ಕಳಪೆ ಕಾಮಗಾರಿ ಬಟಾಬಯಲಾಗಿದೆ.

5 / 6
ಕೇವಲ ಒಂದೆರಡು ದಿನಗಳ ಮಳೆ ಬೆಂಗಳೂರಿನ ಜನರು ನರಕ ನೋಡುವಂತೆ ಮಾಡಿಬಿಟ್ಟಿದೆ. ಇತ್ತ ಬ್ರ್ಯಾಂಡ್ ಬೆಂಗಳೂರು, ಗ್ರೇಟರ್ ಬೆಂಗಳೂರು ಎಂದು ಜಪ ಮಾಡುತ್ತಿರುವ ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಮಳೆಗಾಲದ ಸಿದ್ಧತೆ ಮಾಡಿಕೊಳ್ಳದಿರುವುದು ಮಳೆ ಸೃಷ್ಟಿಸಿದ ಅವಾಂತರಗಳಿಂದ ಬಟಾಬಯಲಾಗಿದೆ. ಮಳೆಗಾಲ ಹತ್ತಿರವಾಗುತ್ತದ್ದು, ವರುಣನ ಅಬ್ಬರ ರಾಜಧಾನಿಯಲ್ಲಿ ಇನ್ನೇನೆಲ್ಲ ಅವಾಂತರಗಳನ್ನ ಸೃಷ್ಟಿಸುತ್ತದೆಯೋ ಎಂಬುದನ್ನು ಕಾದುನೋಡಬೇಕಿದೆ.

6 / 6
Follow us
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ

ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ

ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ

ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ