1996ರಲ್ಲಿ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮವಾಗಿದ್ದ ಬಸವರಾಜ ಬೊಮ್ಮಾಯಿ ನಂತರದ ದಿನಗಳಲ್ಲಿ ಹಲವು ಮಹತ್ವದ ಜವಾಬ್ದಾರಿ ನಿರ್ವಹಿಸಿದರು. ಕಳೆದ ಅವಧಿಯ ಬಿಜೆಪಿ ಸರ್ಕಾರದಲ್ಲಿ ಹಿಂದೆ ಜಲಸಂಪನ್ಮೂಲ ಸಚಿವರು, 2019ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಬಿಜೆಪಿ ಸಭೆಯೊಂದರಲ್ಲಿ ನಗುತ್ತಾ ಮಾತನಾಡುತ್ತಿರುವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಅವರಿಗೆ ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರ ಪೈಕಿ ಬಸವರಾಜ ಬೊಮ್ಮಾಯಿ ಸಹ ಒಬ್ಬರು.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಬಿಜೆಪಿಯ ಹಿರಿಯ ನಾಯಕರು ಬೊಮ್ಮಾಯಿ ಅವರ ಮೇಲೆ ವಿಶ್ವಾಸ ಇರಿಸಿದ್ದಾರೆ.
ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಬಸವರಾಜ ಬೊಮ್ಮಾಯಿ. ಬಿಜೆಪಿಯ ಹಲವು ರಾಜ್ಯಗಳ ಮುಂಚೂಣಿ ನಾಯಕರ ಒಡನಾಟ ಬೊಮ್ಮಾಯಿ ಅವರಿಗಿದೆ.
ಕೊರೊನಾ ಸಂಕಷ್ಟದ ವೇಳೆ ಗೃಹ ಸಚಿವರಾಗಿ ಆಡಳಿತ ಯಂತ್ರವನ್ನು ಸುಸ್ಥಿತಿಯಲ್ಲಿಡಲು ಬಸವರಾಜ ಬೊಮ್ಮಾಯಿ ಶ್ರಮಿಸಿದ್ದರು.
ರಾಜಕೀಯ ಜೀವನದ ಆರಂಭಿಕ ದಿನಗಳನ್ನು ಜನತಾ ಪರಿವಾರದಲ್ಲಿ ಕಳೆದ ಬಸವರಾಜ ಬೊಮ್ಮಾಯಿ ಬಿಜೆಪಿಗೆ ಬಂದಿದ್ದು ಮಧ್ಯ ವಯಸ್ಸು ದಾಟಿದ ಮೇಲೆ. ಆದರೆ ಅವರ ಪಕ್ಷನಿಷ್ಠೆಯನ್ನು ಯಾರೂ ಪ್ರಶ್ನಿಸುವಂತಿರಲಿಲ್ಲ.
Published On - 10:40 pm, Tue, 27 July 21