ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್, ದೋಣಿಯಲ್ಲಿ ಜನರ ಸ್ಥಳಾಂತರ; ಇಲ್ಲಿದೆ ಫೋಟೋಸ್
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ದೂದಗಂಗಾ, ವೇದಗಂಗಾ, ಘಟಪ್ರಭಾ ನದಿ ಅಬ್ಬರ ಜೋರಾಗಿದ್ದು, ನದಿ ಪಾತ್ರದ ಜನರು ತತ್ತರಿಸಿ ಹೋಗಿದ್ದಾರೆ. ಪ್ರವಾಹದಿಂದ ಶುಕ್ರವಾರ ಒಂದೇ ದಿನ ಬೆಳಗಾವಿ ಜಿಲ್ಲೆಯ 6 ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಈವರೆಗೆ ಒಟ್ಟು 36 ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ.