Pumpkin juice: ಪ್ರತಿದಿನ ಬೆಳಿಗ್ಗೆ ಕುಂಬಳಕಾಯಿ ರಸವನ್ನು ಕುಡಿದರೆ ಏನಾಗುತ್ತೆ ಗೊತ್ತಾ?
ಕುಂಬಳಕಾಯಿ ರಸ ಅಥವಾ ಜ್ಯೂಸ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ. ಕುಂಬಳಕಾಯಿ ಜ್ಯೂಸ್ ನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದ್ದು ಪೌಷ್ಠಿಕಾಂಶದ ಗುಣಗಳಿರುವ ತರಕಾರಿಗಳಲ್ಲಿ ಒಂದಾಗಿದೆ. ಹಾಗಾದರೆ ಇದನ್ನು ಪ್ರತಿನಿತ್ಯ ಸೇವನೆ ಮಾಡಿದರೆ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಿ.
Updated on: Mar 21, 2025 | 5:05 PM

ಕುಂಬಳಕಾಯಿ ಹೆಚ್ಚಿನ ಪೌಷ್ಠಿಕಾಂಶದ ಗುಣಗಳಿರುವ ತರಕಾರಿಗಳಲ್ಲಿ ಒಂದಾಗಿದೆ. ಇದರ ರಸ ಅಥವಾ ಜ್ಯೂಸ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಕುಂಬಳಕಾಯಿ ರಸದಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇದು ದೇಹವನ್ನು ರೋಗನಿರೋಧಕವಾಗಿಸುವುದಲ್ಲದೆ ಆಗಾಗ ಕಂಡು ಬರುವ ಶೀತ ಮತ್ತು ಕೆಮ್ಮಿನ ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುತ್ತದೆ.

ಕುಂಬಳಕಾಯಿ ಜ್ಯೂಸ್ ನಲ್ಲಿ ಕಡಿಮೆ ಕ್ಯಾಲೊರಿಗಳು, ಹೆಚ್ಚು ಫೈಬರ್ ಅನ್ನು ಹೊಂದಿರುತ್ತದೆ. ಹಾಗಾಗಿ ಇದು ಹೊಟ್ಟೆ ತುಂಬಿದ ಅನುಭವವನ್ನು ಉಂಟುಮಾಡುತ್ತದೆ. ಜೊತೆಗೆ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಜೀರ್ಣಕಾರಿ ಸಮಸ್ಯೆ ಇರುವವರಿಗೆ ಇದು ತುಂಬಾ ಒಳ್ಳೆಯದು.

ಕುಂಬಳಕಾಯಿ ರಸ ಹೊಟ್ಟೆಯ ಉರಿಯೂತ ಮತ್ತು ಅಜೀರ್ಣದಂತಹ ಸಮಸ್ಯೆಗಳು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಜೊತೆಗೆ ಇದರ ರಸ ಚರ್ಮದ ಆರೋಗ್ಯಕ್ಕೂ ಒಳ್ಳೆಯದು. ಇದು ನಮ್ಮ ಚರ್ಮ ಅಂದವಾಗಿರಲು ಸಹಾಯ ಮಾಡುತ್ತದೆ. ಜೊತೆಗೆ ಸುಕ್ಕುಗಳು ಮತ್ತು ಕಲೆಗಳನ್ನು ತಡೆಯುತ್ತದೆ, ಚರ್ಮವನ್ನು ಹೈಡ್ರೇಟ್ ಆಗಿಡಲು ಸಹಾಯ ಮಾಡುತ್ತದೆ.

ಕುಂಬಳಕಾಯಿಯಲ್ಲಿ ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಇದು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಸ್ವಚ್ಛಗೊಳಿಸುವ ಗುಣಗಳನ್ನು ಹೊಂದಿದೆ.

ಕುಂಬಳಕಾಯಿ ರಸವನ್ನು ತಯಾರಿಸಲು, ಮೊದಲು ಕುಂಬಳಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಮಿಕ್ಸಿಯಲ್ಲಿ ಹಾಕಿ. ಅರ್ಧ ಲೋಟ ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಅಗತ್ಯವಿದ್ದರೆ, ನೀವು ಜೇನುತುಪ್ಪ ಮತ್ತು ನಿಂಬೆ ರಸವನ್ನು ಒಟ್ಟಿಗೆ ಸೇರಿಸಿ ಕುಡಿಯಬಹುದು. ಇದನ್ನು ಬೆಳಿಗ್ಗೆ ಕುಡಿದರೆ, ದೇಹವು ಶುದ್ಧವಾಗುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಖಂಡಿತವಾಗಿಯೂ ಇದನ್ನು ಪ್ರಯತ್ನಿಸಬಹುದು.
























