AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್‌ಪೋರ್ಟ್​ನಲ್ಲಿ ದಸರಾ ಸಂಭ್ರಮ: ರಂಗು ರಂಗಿನ ರಂಗೋಲಿಗೆ ಪ್ರಯಾಣಿಕರು ಫಿದಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವರಾತ್ರಿ ಸಂಭ್ರಮ ಮನೆ ಮಾಡಿದ್ದು, ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. ದಿನವಿಡೀ ಕೆಲಸದಲ್ಲಿ ನಿರತರಾಗಿರುವ ಮಹಿಳಾ ಸಿಬ್ಬಂದಿ, ತಮ್ಮ ಅಸಾಧಾರಣ ಕಲಾ ಪ್ರತಿಭೆ ತೋರುವ ಮೂಲಕ ಪ್ರಯಾಣಿಕರು ಹಾಗೂ ಆಡಳಿತ ಮಂಡಳಿಯನ್ನು ಅಚ್ಚರಿಗೊಳಿಸಿದರು. ಇಲ್ಲಿವೆ ನೋಡಿ ಫೋಟೋಸ್. ​​

ನವೀನ್ ಕುಮಾರ್ ಟಿ.
| Edited By: |

Updated on: Oct 19, 2026 | 5:16 PM

Share
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನವರಾತ್ರಿಯ 9 ದಿನಗಳ ಕಾಲ ಒಂದೊಂದು ದಿನ ಒಂದೊಂದು ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿರುವ ಕೆಐಎಬಿ ಇಂದು ತಮ್ಮ ಮಹಿಳಾ ಸಿಬ್ಬಂದಿಗೆ ವಿಶೇಷ ರಂಗೋಲಿ ಸ್ಪರ್ಧೆಯನ್ನ ಆಯೋಜನೆ ಮಾಡಿತ್ತು.

1 / 5
ಕೆಂಪೇಗೌಡ ಏರ್‌ಪೋರ್ಟ್​ನ ಮಹಿಳಾ ಸಿಬ್ಬಂದಿ ದಿನದ 24 ಗಂಟೆ ಕೆಲಸದಲ್ಲೇ ಬ್ಯುಸಿಯಾಗಿರುತ್ತಾರೆ. ಆದರೆ ಇಂದು ಮಾತ್ರ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ಸ್ಪರ್ಧೆಗಿಳಿದಿದ್ದರು. ಕಲರ್​ ಕಲರ್​ ರಂಗೋಲಿಯಲ್ಲಿ ಚಿತ್ತಾರ ಮೂಡಿಸಿದ್ದಾರೆ. ಮಹಿಳಾ ಸಿಬ್ಬಂದಿ ಕೈಚಳಕಕ್ಕೆ ಏರ್‌ಪೋರ್ಟ್ ಆಡಳಿತ ಮಂಡಳಿಯೇ ಅಚ್ಚರಿಗೊಂಡಿದೆ.

2 / 5
ಏರ್‌ಪೋರ್ಟ್​ನ ಟರ್ಮಿನಲ್ 2ರ ಆಗಮನ ದ್ವಾರದ ಬಳಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದ್ದು, 1 ಗಂಟೆ ಅವಧಿಯಲ್ಲಿ ಕಲರ್ ಫುಲ್ ಆಗಿ ರಂಗೋಲಿ ಬಿಡಿಸುವ ಮೂಲಕ ಮಹಿಳೆಯರು ನೋಡುಗರನ್ನ ಅಚ್ಚರಿಗೊಳಿಸಿದರು. 
ಏರ್‌ಪೋರ್ಟ್​ನಲ್ಲಿ ಕೆಲಸ ಮಾಡುವ ವಿವಿಧ ವಿಭಾಗಗಳ 51 ಮಹಿಳಾ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಏರ್‌ಪೋರ್ಟ್​ನ ಟರ್ಮಿನಲ್ 2ರ ಆಗಮನ ದ್ವಾರದ ಬಳಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದ್ದು, 1 ಗಂಟೆ ಅವಧಿಯಲ್ಲಿ ಕಲರ್ ಫುಲ್ ಆಗಿ ರಂಗೋಲಿ ಬಿಡಿಸುವ ಮೂಲಕ ಮಹಿಳೆಯರು ನೋಡುಗರನ್ನ ಅಚ್ಚರಿಗೊಳಿಸಿದರು. ಏರ್‌ಪೋರ್ಟ್​ನಲ್ಲಿ ಕೆಲಸ ಮಾಡುವ ವಿವಿಧ ವಿಭಾಗಗಳ 51 ಮಹಿಳಾ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

3 / 5
ಜಂಬೂಸವಾರಿ, ಮೈಸೂರು ಅರಮನೆ, ಗಣೇಶ, ಗೋವು ಹೀಗೆ ಹಲವು ಬಣ್ಣಬಣ್ಣದ ರಂಗೋಲಿ ಬಿಡಿಸುವ ಮೂಲಕ    
ಏರ್‌ಪೋರ್ಟ್ ಮಹಿಳಾ ಸಿಬ್ಬಂದಿ ಎಲ್ಲರನ್ನು ಬೆರಗಾಗುವಂತೆ ಮಾಡಿದರು. ಇನ್ನು ಅತ್ಯುತ್ತಮವಾಗಿ ಮೂಡಿಬಂದ ರಂಗೋಲಿಗೆ ಏರ್‌ಪೋರ್ಟ್ ಆಡಳಿತ ಮಂಡಳಿ ಬಹುಮಾನವನ್ನು ನೀಡಿದೆ.

ಜಂಬೂಸವಾರಿ, ಮೈಸೂರು ಅರಮನೆ, ಗಣೇಶ, ಗೋವು ಹೀಗೆ ಹಲವು ಬಣ್ಣಬಣ್ಣದ ರಂಗೋಲಿ ಬಿಡಿಸುವ ಮೂಲಕ ಏರ್‌ಪೋರ್ಟ್ ಮಹಿಳಾ ಸಿಬ್ಬಂದಿ ಎಲ್ಲರನ್ನು ಬೆರಗಾಗುವಂತೆ ಮಾಡಿದರು. ಇನ್ನು ಅತ್ಯುತ್ತಮವಾಗಿ ಮೂಡಿಬಂದ ರಂಗೋಲಿಗೆ ಏರ್‌ಪೋರ್ಟ್ ಆಡಳಿತ ಮಂಡಳಿ ಬಹುಮಾನವನ್ನು ನೀಡಿದೆ.

4 / 5
ಒಟ್ಟಾರೆಯಾಗಿ ಏರ್‌ಪೋರ್ಟ್ ಮಹಿಳಾ ಸಿಬ್ಬಂದಿ ಇಂದು ವಿವಿಧ ಚಿತ್ತಾರಗಳ ರಂಗೋಲಿಯನ್ನ ಬಿಡಿಸುವ ಮೂಲಕ ನವರಾತ್ರಿಯನ್ನ ಸಂಭ್ರಮವನ್ನ ಸಡಗರದಿಂದ ಆಚರಿಸಿದರು.

ಒಟ್ಟಾರೆಯಾಗಿ ಏರ್‌ಪೋರ್ಟ್ ಮಹಿಳಾ ಸಿಬ್ಬಂದಿ ಇಂದು ವಿವಿಧ ಚಿತ್ತಾರಗಳ ರಂಗೋಲಿಯನ್ನ ಬಿಡಿಸುವ ಮೂಲಕ ನವರಾತ್ರಿಯನ್ನ ಸಂಭ್ರಮವನ್ನ ಸಡಗರದಿಂದ ಆಚರಿಸಿದರು.

5 / 5
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Follow Us
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ