Kannada News Photo gallery Bengaluru Metro Yellow Line: Major relief from traffic congestion; Check full list of stations
ಟ್ರಾಫಿಕ್ ಸಮಸ್ಯೆಯಿಂದ ಸವಾರರಿಗೆ ರಿಲೀಫ್: ಹಳದಿ ಮಾರ್ಗದ ನಮ್ಮ ಮೆಟ್ರೋ ಎಲ್ಲೆಲ್ಲಿ ನಿಲುಗಡೆ?
ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗವು ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ವಿಸ್ತರಿಸಿರುವ ಈ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. ಟ್ರಾಫಿಕ್ ಸಮಸ್ಯೆ ಇರುವ ಮಾರ್ಗದಲ್ಲಿ ಮೆಟ್ರೋ ಆರಂಭವಾಗುತ್ತಿರುವುದು ವಾಹನ ಸವಾರರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಮೆಟ್ರೋ ಹಳದಿ ಮಾರ್ಗಕ್ಕಾಗಿ ಕಾದು ಕಾದು ಸುಸ್ತಾಗಿದ್ದವರಿಗೆ ಕೊನೆಗೂ ರೈಲ್ವೆ ಕಮೀಷನರ್ ಗ್ರೀನ್ ಸಿಗ್ನಲ್ ನೀಡಿದ್ದು, ಆಗಸ್ಟ್ 10ರಂದು ಟ್ರ್ಯಾಕಿಗಿಳಿಯಲಿದೆ.
1 / 6
ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ, ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.
2 / 6
ಸದಾ ಟ್ರಾಫಿಕ್ನಿಂದ ಕೂಡಿರುವ ಆರ್.ವಿ ರೋಡ್ ಟು ಬೊಮ್ಮಸಂದ್ರ ಮಾರ್ಗದಲ್ಲಿ ಮೆಟ್ರೋ ಆರಂಭಗೊಳ್ಳಿತ್ತಿರುವುದರಿಂದ ವಾಹನ ಸವಾರರಿಗೆ ದೊಡ್ಡ ರಿಲೀಫ್ ಸಿಗಲಿದೆ.
3 / 6
ಇನ್ನು ಈ ಮಾರ್ಗದಲ್ಲಿ 16 ಮೆಟ್ರೋ ಸ್ಟೇಷನ್ಗಳಿವೆ. ಆರ್.ವಿ ರೋಡ್, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಹೊಸರೋಡ್, ಬೇರೆಟೇನಾ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್ ಕೊನಪ್ಪನ ಅಗ್ರಹಾರ, ಹೂಸ್ಕೂರು ರೋಡ್, ಬಯೋಕಾನ್ ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ.
4 / 6
ಈ ಎಲ್ಲಾ ಮೆಟ್ರೋ ಸ್ಟೇಷನ್ಗಳಿಗೂ ಡ್ರೈವರ್ಲೆಸ್ ರೈಲುಗಳು ಸಂಚಾರ ಮಾಡಲಿದೆ. ಆದರೆ 25 ನಿಮಿಷಗಳಿಗೊಮ್ಮೆ ಒಂದು ಮೆಟ್ರೋ ರೈಲು ಸಂಚಾರ ಮಾಡಲಿದೆ.
5 / 6
ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗೆ ಸುಮಾರು 5,056.99 ಕೋಟಿ ವೆಚ್ಚದಲ್ಲಿ ಸುಮಾರು 19.15 ಕಿಲೋ ಮೀಟರ್ ಉದ್ದದ ಮೆಟ್ರೋ ಹಳದಿ ಮಾರ್ಗ ನಿರ್ಮಾಣ ಮಾಡಲಾಗಿದೆ.