ರಾಜ್ಯದಲ್ಲಿ ಮುಂದಿನ 5 ದಿನ ಧಾರಕಾರ ಮಳೆ ಆಗಲಿದೆ ಎಂದು ಬುಧವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದೂ ಕೂಡ ಬೆಂಗಳೂರು ಸೇರಿದಂತೆ ವಿವಿಧೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ನಿರಂತರ ಮಳೆಯಿಂದ ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರ ಪರದಾಡಿದ್ದಾರೆ.

ಹಲವೆಡೆ ಬೃಹತ್ ಗಾತ್ರದ ಮರಗಳು ಮನೆಗಳ ಮೇಲೆ ಧರೆಗುರುಳಿವೆ. ಕೆಲವೆಡೆ ಸಾವು ನೋವು ವರದಿಯಾಗಿವೆ.

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಮನೆ ಮೇಲ್ಚಾವಣಿಗಳು ಕುಸಿದು ಬಿದ್ದಿವೆ.

ಧಾರಾಕಾರ ಮಳೆ ಪರಿಣಾಮ ಮಂಡ್ಯ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡೆತ್ತುಗಳ ದಾರುಣ ಸಾವಪ್ಪಿದ್ದಾವೆ.