
ಕಾಮಗಾರಿ ಹಿನ್ನೆಲೆ ಇದೇ ಶನಿವಾರ ಅಂದರೆ ಸೆ. 23 ರಂದು ಬೆಂಗಳೂರು ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ.

ತಾತಗುಣಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಲ ಕಾಮಗಾರಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ಫಾರ್ಮರ್ ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಆಗಿದೆ.

ಹಿನ್ನೆಲೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿರುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಮತ್ತು ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.