- Kannada News Photo gallery Bengaluru Rain Emergency: Traffic Advisory, Due to rain vehicle slow moving in Bengaluru roads, Kannada News
ಬೆಂಗಳೂರು: ಮಳೆಯಿಂದ ರಸ್ತೆಗಳಲ್ಲಿ ನಿಂತ ನೀರು, ವಾಹನ ಸಂಚಾರಕ್ಕೆ ಅಡಚಣೆ
ಬೆಂಗಳೂರು ನಗರದಲ್ಲಿ ನಸುಕಿನ ಜಾವ ಮಳೆರಾಯನ ಆರ್ಭಟ ಜೋರಾಗಿತ್ತು. ಇದೀಗ ಮಳೆ ಸ್ವಲ್ಪ ಕಡಿಮೆಯಾಗಿದ್ದು, ಜಿಟಿ ಜಿಟಿ ಮಳೆಯಾಗುತ್ತಿದೆ. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹಾಗಿದ್ದರೆ ಯಾವ ರಸ್ತೆಯಲ್ಲಿ ನೀರು ನಿಂತಿದೆ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ? ಇಲ್ಲಿದೆ ಮಾಹಿತಿ
Updated on:Oct 20, 2024 | 9:05 AM

ಬೆಂಗಳೂರು ನಗರದಲ್ಲಿ ನಸುಕಿನ ಜಾವ ಮಳೆರಾಯನ ಆರ್ಭಟ ಜೋರಾಗಿತ್ತು. ಗುಡು, ಮಿಂಚು ಸಹಿತ ಭಾರಿ ಮಳೆಯಾಯ್ತು. ಇದೀಗ ಮಳೆ ಸ್ವಲ್ಪ ಕಡಿಮೆಯಾಗಿದ್ದು, ಜಿಟಿ ಜಿಟಿ ಮಳೆಯಾಗುತ್ತಿದೆ. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಜೈರಾಮ್ ಜಂಕ್ಷನ್ ಆರ್‌ವಿ ಕಾಲೇಜಿನ ಎರಡೂ ಕಡೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಮೈಸೂರು ರಸ್ತೆಯ ಜಯರಾಮದಾಸ್ ಜಂಕ್ಷನ್ ಹತ್ತಿರ ನೀರು ನಿಂತಿರುವುದರಿಂದ ಬೆಂಗಳೂರು ನಗರ ಮತ್ತು ಕೆಂಗೇರಿ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಹೀಗಾಗಿ ವಾಹನ ಸವಾರರು ಸಹಕರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಬಳಿ ವಾಟರ್ ಲಾಗಿಂಗ್ ಆಗಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಮಳೆಯಿಂದ ವರ್ತುರ್- ಗುಂಜೂರಿನ ಎರಡೂ ಕಡೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮಳೆಯಿಂದಾಗಿ ಸಿಲ್ಕ್ಬೋರ್ಡ್ ಜಂಕ್ಷನ್ ರಸ್ತೆ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ಸಿಲ್ಕ್ಬೋರ್ಡ್ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್ ಆಗಿದೆ. ಚರಂಡಿಗೆ ಹಾಕಿದ್ದ ಸ್ಲ್ಯಾಬ್ಗಳು ಓಪನ್ ಆಗಿ, ಅದರಿಂದ ನೀರು ಹೊರಬಂದು ಅವಾಂತರ ಸೃಷ್ಟಿಯಾಗಿದೆ. ಇದರಿಂದ ಬೊಮ್ಮನಹಳ್ಳಿಯಿಂದ ಸಿಲ್ಕ್ಬೋರ್ಡ್ವರೆಗೆ ನಿಧಾನಗತಿಯ ಸಂಚಾರವಿರುತ್ತದೆ.
Published On - 9:01 am, Sun, 20 October 24




