Updated on: May 23, 2023 | 10:02 PM
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.
ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.