- TV9 Kannada Photo gallery Bengaluru Rains: heavy rains in Bangaluru today too: including Vijayanagar, Majestic and many places, Karnataka news in kannada
Bengaluru Rains: ಬೆಂಗಳೂರಿನಲ್ಲಿ ವರುಣಾರ್ಭಟ: ವಿಕೇಂಡ್ ಮೂಡ್ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ
ಹವಾಮಾನ ಇಲಾಖೆ ನಿನ್ನೆಯಷ್ಟೇ ಅಕ್ಟೋಬರ್ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ನಿನ್ನೆಯಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇಂದು ನಗರದಲ್ಲಿ ಜೋರು ಮಳೆ ಆಗಿದೆ. ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದ್ದು, ಜನರು ಪರದಾಡುವಂತಾಗಿದೆ.
Updated on: Oct 04, 2024 | 8:43 PM
Share

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ನಗರದ ಹಲವೆಡೆ ಜೋರು ಮಳೆ ಆಗಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ಬೆಂಗಳೂರಿಗೆ ಯಲ್ಲೋ ಅಲರ್ಟ್ ನೀಡಿದೆ.

ನಗದರಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಕೆಆರ್ ಮಾರ್ಕೆಟ್ ಸೇರಿದಂತೆ ನಗರದ ಹಲವೆಡೆ ಮಳೆ ಸುರಿದಿದೆ. ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

ಆನೇಕಲ್, ಜಿಗಣಿ, ಬನ್ನೇರುಘಟ್ಟ ಚಂದಾಪುರ ಹಲವೆಡೆ ಮಳೆ ಆಗಿದ್ದು, ರಸ್ತೆಯಲ್ಲಿಯೇ ಮಳೆ ನೀರು ನಿಂತಿದೆ. ಹೀಗಾಗಿ ಪಾದಚಾರಿಗಳು ಪರದಾಡುವಂತಾಗಿದೆ.

ಇನ್ನು ಸಂಜೆ ಆಗುತ್ತಿದ್ದಂತೆ ದಿಢೀರ್ ಎಂಟ್ರಿ ಕೊಟ್ಟ ವರುಣ ವಿಜಯನಗರ, ಮಾಗಡಿ ರಸ್ತೆ, ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಆರ್‌ಆರ್ ನಗರದಲ್ಲಿ ಕೂಡ ಜೋರು ಮಳೆ ಸುರಿದಿದೆ.

ಜೋರು ಮಳೆಗೆ ವೀರಸಂದ್ರ, ಇಲೆಕ್ಟ್ರಾನಿಕ್ ಸಿಟಿ ರಸ್ತೆ ಸಂಪೂರ್ಣ ಜಲಾವೃವಾಗಿದೆ.

ನಗರದ ಸರ್ಜಾಪುರ ರಸ್ತೆಯ ವಿಪ್ರೋ ಸಿಗ್ನಲ್ ಬಳಿ ಕೂಡ ಭಾರೀ ಮಳೆಯಾಗಿದೆ.
Related Photo Gallery
ಇಂದು ಈ ರಾಶಿಯವರಿಗೆ ಒತ್ತಡಗಳಿಂದ ಮುಕ್ತಿ
ಧುರಂಧರ್ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್ಎಸ್ಎಸ್ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?




