AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಅವಾಂತರ: ಮನೆ ಮೇಲೆ ಬಿದ್ದ ಮರ, ರಸ್ತೆ ಜಲಾವೃತ, ಇಲ್ಲಿವೆ ಫೋಟೋಸ್

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಕೆಲವೆಡೆ ಬೃಹತ್​ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಅಲ್ಲಲ್ಲಿ ನಿಧಾನಗತಿಯ ಸಂಚಾರವಿರಲಿದೆ. ಇನ್ನು ರಾಜಾಜಿನಗರದ 4ನೇ ಬ್ಲಾಕ್‌ನಲ್ಲಿ ಎರಡು ಮನೆಗಳ ಮೇಲೆ ದೊಡ್ಡ ಮರ ಬಿದ್ದಿದೆ. ಇಲ್ಲಿವೆ ಫೋಟೋಸ್​ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Sep 11, 2025 | 9:10 AM

Share
ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

1 / 6
ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. 
ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

2 / 6
ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

3 / 6
ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

4 / 6
ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

5 / 6
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

6 / 6

Published On - 9:10 am, Thu, 11 September 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್