ಚೆನ್ನೈನಲ್ಲಿ ಇರುವ ಎಂ.ಕೆ. ಸ್ಟಾಲಿನ್ ಅವರ ನಿವಾಸದಲ್ಲಿ ಈ ಭೇಟಿ ನಡೆದಿದೆ. ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಜೊತೆ ಶಿವರಾಜ್ಕುಮಾರ್ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್ಕುಮಾರ್ ಮತ್ತು ಎಂ.ಕೆ. ಸ್ಟಾಲಿನ್ ಕುಟುಂಬದ ನಡುವೆ ಒಡನಾಟ ಇದೆ.

ಎಂ.ಕೆ. ಸ್ಟಾಲಿನ್ ಅವರಿಗೆ ಶಿವರಾಜ್ಕುಮಾರ್ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಜೊತೆ ಶಿವರಾಜ್ಕುಮಾರ್ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್ಕುಮಾರ್ ಮತ್ತು ಎಂ.ಕೆ. ಸ್ಟಾಲಿನ್ ಕುಟುಂಬದ ನಡುವೆ ಒಡನಾಟ ಇದೆ.

ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್ ರಾಜ್ಕುಮಾರ್ ನಿಧನರಾದಾಗ ಎಂ.ಕೆ. ಸ್ಟಾಲಿನ್ ಅವರು ಪತ್ರದ ಮುಖಾಂತರ ಡಾ. ರಾಜ್ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.