- Kannada News Photo gallery Bharat Bandh Photos Various unions have protested against the Agricultural Laws in Karnataka
Bharat Bandh Photos: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆ; ಫೋಟೋಗಳು ಇಲ್ಲಿವೆ
Bharat Bandh: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಲ್ಲಿ ವಿವಿಧ ಸಂಘಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
Updated on: Sep 27, 2021 | 11:52 AM

ಕೃಷಿ ತಿದ್ದುಪಡಿ ಕಾಯ್ದೆ ಖಂಡಿಸಿ ಭಾರತ್ ಬಂದ್ ಹಿನ್ನೆಲೆ ಆನೇಕಲ್ ಬಸ್ ನಿಲ್ದಾದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿ ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದೆ.

ನೂತನ ಕೃಷಿ ಮಸೂದೆ ವಿರೋಧಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ ನಡೆದಿದೆ. ಈ ವೇಳೆ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಬಳ್ಳಾರಿ ನಗರದ ರಾಯಲ್ ಸರ್ಕಲ್ನಲ್ಲಿ ಭಿತ್ತಿಪತ್ರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಕಪುರ ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭಾರತ್ ಬಂದ್ಗೆ ಬೆಂಬಲಿಸದವರ ವಿರುದ್ಧ ಧರಣಿನಿರತರು ಅಸಮಾಧಾನ ಹೊರಹಾಕಿದ್ದಾರೆ. ಹೂವುಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದಲ್ಲೂ ಧರಣೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಫೋಟೋಗೆ ಬೆಂಕಿ ಹಂಚಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಚಿತ್ರದುರ್ಗದಲ್ಲಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಗಾಂಧಿ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಧರಣಿ ನಡೆಯುತ್ತಿದೆ.

ರೈತರು ಎಮ್ಮೆಗಳ ಸಮೇತ ಧರಣಿಯಲ್ಲಿ ಭಾಗಿಯಾಗಿದ್ದಾರೆ. ಈ ಘಟನೆ ಧಾರವಾಡದ ಜ್ಯುಬಿಲಿ ಸರ್ಕಲ್ನಲ್ಲಿ ನಡೆದಿದೆ.

ಕೋಲಾರದಲ್ಲಿ ಬೈಕ್ ಮತ್ತು ಟ್ರ್ಯಾಕ್ಟರ್ ಜಾಥಾ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಕತ್ತೆಗಳನ್ನು ಹಿಡಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಕೊಪ್ಪಳದಲ್ಲಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಔಭಟನೆ ನಡೆಸಿದ್ದಾರೆ.

ಇನ್ನು ಶಿವಮೊಗ್ಗದಲ್ಲೂ ರೈತರು ಬೈಕ್ ಜಾಥಾ ನಡೆಸಿ ಧರಣಿ ಮಾಡಿದ್ದಾರೆ.




