Updated on: Oct 03, 2022 | 8:55 PM
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ಅವರು ತಮ್ಮ ಬಿಡುವಿನ ಸಮಯದಲ್ಲಿ ಬೆಟ್ಟಕ್ಕೆ ನೀಡಿ, ಚಾಮುಂಡಿ ತಾಯಿಯ ಕೃಪೆಗೆ ಪಾತ್ರರಾದರು.
ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸಾಥ್ ನೀಡಿದರು.
ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ, ಒಂದು ಗಂಟೆಗಳ ಕಾಲ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ಬೆಟ್ಟಕ್ಕೆ ತೆರಳುವ ಮಾರ್ಗವನ್ನು ಪೊಲೀಸರು ಬಂದ್ ಮಾಡಿದ್ದರು.
ಮೈಸೂರು ಭಾಗದಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿದ್ದು, ಸೋನಿಯಾ-ರಾಹುಲ್ ಭೇಟಿಯಿಂದ ಕಾಂಗ್ರೆಸ್ನಲ್ಲಿ ಹೊಸ ಹುಮ್ಮಸ್ಸು ತರಲಿದೆ.
Published On - 8:51 pm, Mon, 3 October 22