AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲು ನಾಡು ಬೀದರ್​ನಲ್ಲಿ ಗೋಡಂಬಿ ಬಳೆದ ರೈತ: ಅಪಾರ ಆದಾಯ

ಮಲೆನಾಡಿನಿಂದ ಬಂದ ಗೋಡಂಬಿ ಬೆಳೆ ಬೀದರ್ ರೈತರ ಜೀವನವನ್ನು ಬದಲಾಯಿಸಿದೆ. ಅತೀವೃಷ್ಠಿ ಮತ್ತು ಅನಾವೃಷ್ಠಿಯಿಂದ ಬಳಲುತ್ತಿದ್ದ ಈ ಪ್ರದೇಶದಲ್ಲಿ, ಗೋಡಂಬಿ ಬೆಳೆ ಲಕ್ಷಾಂತರ ರೂಪಾಯಿ ಆದಾಯವನ್ನು ನೀಡುತ್ತಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಈ ಬೆಳೆ, 400 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆಯುತ್ತಿದ್ದು, ರೈತರ ಮುಖದಲ್ಲಿ ಸಂತೋಷ ತಂದಿದೆ. ತೋಟಗಾರಿಕೆ ಇಲಾಖೆಯ ಮಾರ್ಗದರ್ಶನ ಈ ಯಶಸ್ಸಿಗೆ ಕಾರಣವಾಗಿದೆ.

ಸುರೇಶ ನಾಯಕ
| Edited By: |

Updated on:Apr 21, 2025 | 9:05 PM

Share
ಕೇವಲ ಮಲೆನಾಡಿಗಷ್ಟೇ ಸೀಮಿತವಾಗಿದ್ದ ಗೋಡಂಬಿ ಬೆಳೆ ಈಗ ಬೀಸಲ ನಗರಿ ಗಡೀ ಜಿಲ್ಲೆ ಬೀದರ್ ಗೂ ಕಾಲಿಟ್ಟಿದೆ. ಅತೀವೃಷ್ಠಿ ಹಾಗೂ ಅನಾವೃಷ್ಠಿಗೆ ತುತ್ತಾಗಿದ್ದ ಜಿಲ್ಲೆಯ ಜನರಿಗೆ ಗೋಡಂಬಿ ಬೆಳೆ ಕೈ ಹಿಡಿದಿದೆ. ಬಡವರ ಬೆಳೆ ಶ್ರೀಮಂತರ ಆಹಾರ ಎಂದೇ ಕರೆಯಿಸಿಕೊಳ್ಳುವ ಗೋಡಂಬಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಲಕ್ಷಾಂತರ ರೂಪಾಯಿ ಆದಾಯದ ನಿರಿಕ್ಷೆಯಲ್ಲಿದ್ದಾರೆ.

1 / 9
ಬಯಲು ಸೀಮೆಯ ಬರಡು ಭೂಮಿಯಲ್ಲಿ ಗೋಡಂಬಿಯ ಬಂಪರ್ ಬೆಳೆಯನ್ನು ಬೆಳೆಯುವುದರ ಮೂಲಕ ಬೀದರ್ ಜಿಲ್ಲೆಯ ರೈತರು ಸೈ ಎಣಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸರಿ ಸುಮಾರು 400 ಹೆಕ್ಟೇರ್ ಪ್ರದೇಶದಲ್ಲಿ ಗೇರು ಗಿಡನೆಟ್ಟ ರೈತರು ಉತ್ತಮ ಲಾಭ ಪಡೆಯುವ ನಿರಿಕ್ಷೆಯಲ್ಲಿದ್ದಾರೆ. ಕೇವಲ ಮಲೆನಾಡಿಗಷ್ಟೇ ಸೀಮತವಾಗಗಿದ್ದ ಗೋಡಂಬಿ ಬೆಳೆ ಬೀದರ್ ಜಿಲ್ಲೆಗೂ ಕಾಲಿಟ್ಟು ರೈತರ ಪಾಲಿಗೆ ಹಣ ನೀಡುವ ಯಂತ್ರವಾಗಿ ಪರಿಣಮಿಸಿದೆ.

2 / 9
ತೋಟಗಾರಿಕೆ ಇಲಾಖೆಯ ಮಾರ್ಗದರ್ಶನದಂತೆ ಶೂನ್ಯ ಬಂಡವಾಳದೊಂದಿಗೆ ಬೆಳೆದ ಗೋಡಂಬಿ ಬೆಳೆಯಿಂದ ರೈತರು ಸಾಂಪ್ರದಾಯಿಕ ಬೆಳೆಗಳಷ್ಟೇ ಆದಾಯ ಪಡೆಯುತ್ತಿದ್ದಾರೆ. ಜವಗು ಮಿಶ್ರಿತ ಕೆಂಪು ಭೂ ಪ್ರದೇಶವನ್ನು ಹೊಂದಿರುವ ಬೀದರ್ ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಸಮೃದ್ಧವಾಗಿ ಬೆಳೆದಿರುವ ಗೋಡಂಬಿ ಮರಗಳು ನಿರೀಕ್ಷಗೂ ಮಿರಿ ಆದಾಯವನ್ನು ನೀಡುತ್ತಿವೆ.

3 / 9
ಯಾವುದೆ ರಾಸಾಯನಿಕ ಬಳಸದೆ ಸಾವಯವ ಕೃಷಿ ಪದ್ಧತಿಯಲ್ಲಿ ಜಮೀನಿನ ಬದುವಿನಲ್ಲಿ ಹಾಕಲಾದ ಗೋಡಂಬಿ ಬೀಜಗಳು ನೈಸರ್ಗಿಕ ಕೃಷಿ ಪದ್ಧತಿಯಿಂದಾಗಿ ಹುಲುಸಾಗಿ ಬೆಳೆದು ಇದೀಗ ಲಕ್ಷ ಲಕ್ಷ ರೂಪಾಯಿ ಆದಾಯ ಬರುವಂತೆ ಮಾಡಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ ರೈತರ ಪಪ್ಪು ಪಾಟೀಲ್ ಅವರು ಕೂಡಾ ತಮ್ಮ ಹೊಲದಲ್ಲಿ ಸುಮಾರು ಐದು ಎಕರೆಯಷ್ಟು ಪ್ರದೇಶದಲ್ಲಿ ಗೋಡಂಬಿ ಬೆಳೆದಿದ್ದಾರೆ.

4 / 9
ಐದು ಎಕರೆಯಷ್ಟು ಜಮೀನಿನಲ್ಲಿ ಬೆಳೆಸಿದ ಗೋಂಡಬಿ ಚೆನ್ನಾಗಿ ಬಂದಿದ್ದು ಸುಮಾರು 20 ಕ್ಷಿಂಟಾಲ್ ವರೆಗೆ ಬೀಜಗಳು ಬರಬಹುದೆಂದು ಅಂದಾಜು ಮಾಡಿದ್ದು ಲಕ್ಷಾಂತರ ರೂಪಾಯಿ ಅದಾಯ ಘಳಿಸುವ ನಿರಿಕ್ಷೇಯನ್ನ ರೈತ ಹೊಂದಿದ್ದಾರೆ.

5 / 9
ಬೀದರ್ ಜಿಲ್ಲೆಯಲ್ಲಿ ಅತೀ ಹೆಚ್ಚಾಗಿ ಭಾಲ್ಕಿ ಹಾಗೂ ಬೀದರ್ ತಾಲೂಕಿನಲ್ಲಿ ಗೇರು ಗಿಡಗಳನ್ನ ನೆಟ್ಟಿದ್ದು ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮ ಒಂದರಲ್ಲಿಯೇ 10 ಹೆಕ್ಟರ್​ಗೂ ಅಧಿಕ ಗೇರು ಗಿಡಗಳನ್ನು ನೆಟ್ಟಿದ್ದು ಅದರಿಂದಾಗಿ ಲಾಭ ಪಡೆಯುತ್ತಿದ್ದಾರೆ. ಬೀದರ್ ಜಿಲ್ಲೆಯ ಹವಾಮಾನಕ್ಕೆ ಗೇರು ಗಿಡಗಳನ್ನು ನೆಟ್ಟರೇ ಉತ್ತಮ ಇಳುವರಿಯನ್ನು ಕೊಡುತ್ತದೆ ಎಂದು ತೋಟಗಾರಿಕೆಯ ಇಲಾಖೆಯ ಅಧಿಕಾರಿಗಳು ರೈತರಿಗೆ ಸಲಹೆಯನ್ನು ನೀಡಿದ್ದರು.

6 / 9
ಅಧಿಕಾರಿಗಳ ಸಲಹೆಯಂತೆ ರೈತರು ಸಾಲ ಮಾಡಿ ಗೇರು ಗಿಡಗಳನ್ನು ಖರೀದಿಸಿ ನೆಟ್ಟಿದ್ದಾರೆ. ಇಷ್ಟೊಂದು ವೈಶಿಷ್ಟ್ಯಪೂರ್ಣ ಗೋಡಂಬಿಯನ್ನು ಉತ್ತಮ ರೀತಿಯಲ್ಲಿ ಬೆಳೆದು ಇತರ ತೋಟಗಾರಿಕೆ ಬೆಳೆಗಾರರಿಗೆ ಮಾದರಿಯಾಗಿ ಗೋಡಂಬಿ ಬೆಳೆಗಾರರು ನಿಂತಿದ್ದಾರೆ. ಸರ್ಕಾರದ ಯಾವುದೇ ಪ್ರೋತ್ಸಾಹ ಧನ, ಪಡೆಯದೆ ಸ್ವಯಂ ಪ್ರೇರಣೆಯಿಂದ ತಮ್ಮ ಜಮೀನಲ್ಲಿ ಸುತ್ತಲೂ ಪ್ರಾಯೋಗಿಕವಾಗಿ ಜಿಲ್ಲೆಯ ನೂರಾರು ರೈತರು ಗೋಡಂಬಿ ಗಿಡನೆಟ್ಟು ಈಗ ಕೈತುಂಬ ಹಣ ಪಡೆಯುತ್ತಿದ್ದಾರೆ.

7 / 9
ಗೋಡಂಬಿಯ ಬೀಜವನ್ನು ಉತ್ತರ ಕನ್ನಡ ಜಿಲ್ಲೆಯಿಂದ ತಂದು ತಮ್ಮ ಬರಡು ಭೂಮಿಯಲ್ಲಿ ಗಿಡ ನೆಟ್ಟು  ಇದೀಗ ಪ್ರತಿ ವರ್ಷ ಸಾಂಪ್ರದಾಯಿಕ ವಾರ್ಷಿಕ ಬೆಳೆ ನೀಡುವ ಆದಾಯಕ್ಕಿಂತ ಹೆಚ್ಚು ಆದಾಯ ಈ ಗೋಡಂಬಿಯಿಂದ ರೈತರು ಪಡೆಯುತ್ತಿದ್ದಾರೆ. ಗೋಡಂಬಿ ಬೆಳೆ ಬೆಳೆಯಲು ಸೂಕ್ತವಾದ ವಾತಾವರಣ ಮತ್ತು ಅದಕ್ಕೆ ಬೇಕಾದ ಕೆಂಪು ಮಿಶ್ರಿತ ಮಣ್ಣು  ಬೀದರ್ ಜಿಲ್ಲೆಯಲ್ಲಿ ಇರುವುದರಿಂದ ರೈತರು ಗೋಡಬಿ ಬೆಳೆದು ಬದುಕು ಹಸನಾಗಿಸಿಕೊಳ್ಳಬಹುದೆಂದು ತೋಟಗಾರಿಗೆ ಇಲಾಖೆಯ ಅಧಿಖಾರಿಗಳು ರೈತರಿಗೆ ಸಲಹೆ ನೀಡುತ್ತಿದ್ದಾರೆ.

8 / 9
ಗೋಡಂಬಿ ಇಳುವರಿ ಎಕರೆಗೆ 10-12  ಬರುವ ನಿರೀಕ್ಷೆ ಇದೆ. ಇನ್ನು, ಇವರು ಬೆಳೆದಿರುವ ಗೇರು ಬೀಜವನ್ನ ಗ್ರಾಮಕ್ಕೆ ಬಂದು ಖರಿದಿಸಿಕೊಂಡು ಹೋಗುತ್ತಿರುವುದರಿಂದ ಮಾರುಕಟ್ಟೆಯ ಸಮಸ್ಯೆಯೂ ಕೂಡಾ ಇವರಿಗಿಲ್ಲ ಹೀಗಾಗಿ ಗೇರು ಬೀಜದಿಂದ ಲಾಭ ಪಡೆಯುತ್ತಿದ್ದಾರೆ.

9 / 9

Published On - 4:38 pm, Mon, 21 April 25

Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ