ಸೌಲಭ್ಯಗಳ ಮಹಾಪೂರ, ಸಾಧನೆಯ ಶಿಖರ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಘೋಡಂಪಳ್ಳಿ ಸರ್ಕಾರಿ ಶಾಲೆ

Edited By:

Updated on: Nov 16, 2026 | 6:02 PM

ಬೀದರ್‌ನ ಘೋಡಂಪಳ್ಳಿ ಸರ್ಕಾರಿ ವಸತಿ ಶಾಲೆ ಗುಣಮಟ್ಟದ ಶಿಕ್ಷಣ ನೀಡಿ ಖಾಸಗಿ ಶಾಲೆಗಳಿಗೆ ಸವಾಲು ಹಾಕುತ್ತಿದೆ. 18 ಎಕರೆ ವಿಶಾಲ ಪ್ರದೇಶದಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ 6ರಿಂದ 12ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತದೆ. ಪ್ರತಿವರ್ಷ 100% ಫಲಿತಾಂಶದ ಜೊತೆಗೆ JEE ಪರೀಕ್ಷೆಯಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ.

1 / 6
ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಖಾಸಗಿ ಶಾಲೆಗಳಿಗೂ ಸೆಡ್ಡು ಹೊಡೆಯುವಂತೆ ತಲೆ ಎತ್ತಿ ನಿಂತ್ತಿದೆ. ಸರ್ಕಾರಿ ಶಾಲೆಗಳ ಬಗ್ಗೆ ಇರುವ ಮೂಲಸೌಕರ್ಯಗಳ ಕೊರತೆ ಮತ್ತು ಗುಣಮಟ್ಟದ ಶಿಕ್ಷಣದ ಅಭಾವದ ಕಲ್ಪನೆಗಳನ್ನು ಸುಳ್ಳಾಗಿಸಿರುವ ಈ ಶಾಲೆ, ಮಕ್ಕಳಿಗೆ ಜ್ಞಾನ, ವಿಜ್ಞಾನ, ಸಂಸ್ಕಾರ, ಕ್ರೀಡೆ ಹಾಗೂ ಸೃಜನಶೀಲತೆಯ ಶಿಕ್ಷಣ ನೀಡುತ್ತಿದೆ.

ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಖಾಸಗಿ ಶಾಲೆಗಳಿಗೂ ಸೆಡ್ಡು ಹೊಡೆಯುವಂತೆ ತಲೆ ಎತ್ತಿ ನಿಂತ್ತಿದೆ. ಸರ್ಕಾರಿ ಶಾಲೆಗಳ ಬಗ್ಗೆ ಇರುವ ಮೂಲಸೌಕರ್ಯಗಳ ಕೊರತೆ ಮತ್ತು ಗುಣಮಟ್ಟದ ಶಿಕ್ಷಣದ ಅಭಾವದ ಕಲ್ಪನೆಗಳನ್ನು ಸುಳ್ಳಾಗಿಸಿರುವ ಈ ಶಾಲೆ, ಮಕ್ಕಳಿಗೆ ಜ್ಞಾನ, ವಿಜ್ಞಾನ, ಸಂಸ್ಕಾರ, ಕ್ರೀಡೆ ಹಾಗೂ ಸೃಜನಶೀಲತೆಯ ಶಿಕ್ಷಣ ನೀಡುತ್ತಿದೆ.

2 / 6

ಸುಮಾರು 18 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ವಸತಿ ಶಾಲೆಯಲ್ಲಿ 6ರಿಂದ 12ನೇ ತರಗತಿವರೆಗೆ 650 ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಶಾಲೆಯ ಆವರಣ ಹಸಿರಿನಿಂದ ಕಂಗೊಳಿಸುತ್ತಿದ್ದು, ಸುಂದರ ಉದ್ಯಾನವನ ಮಕ್ಕಳನ್ನು ಆಕರ್ಷಿಸುತ್ತಿದೆ.

3 / 6

ಶಾಲೆಯ ಉದ್ಯಾನವನದಲ್ಲಿ ಹುಲಿ, ಜಿರಾಫೆ, ಮೊಸಳೆ, ಆನೆ, ಡೈನೋಸಾರ್, ನವಿಲು ಹಾಗೂ ಆಮೆ ಸೇರಿದಂತೆ ವಿವಿಧ ಪ್ರಾಣಿಗಳ ಆಕರ್ಷಕ ಮೂರ್ತಿಗಳನ್ನು ನಿರ್ಮಿಸಲಾಗಿದೆ. ಇವು ಮಕ್ಕಳಿಗೆ ಪ್ರಾಣಿ ಪ್ರಪಂಚದ ಪರಿಚಯ ಮಾಡಿಕೊಡುವುದರ ಜೊತೆಗೆ ಕಲಿಕೆಯ ಆಸಕ್ತಿಯನ್ನೂ ಹೆಚ್ಚಿಸುತ್ತವೆ.

4 / 6

ಮಕ್ಕಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವ ಉದ್ದೇಶದಿಂದ ಮಾನವನ ಮೆದುಳು, ಹೃದಯ ಸೇರಿದಂತೆ ದೇಹದ ಪ್ರಮುಖ ಅಂಗಾಂಗಗಳ ಮಾದರಿಗಳನ್ನು ಶಾಲಾ ಆವರಣದಲ್ಲಿ ಪ್ರದರ್ಶಿಸಲಾಗಿದೆ. ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗಳು ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶ ಸಾರುತ್ತವೆ.

5 / 6

ಇನ್ನು ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಶಾಲೆಯಲ್ಲಿ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯಗಳು, ಸ್ಮಾರ್ಟ್ ಕ್ಲಾಸ್‌ಗಳು, ಕಂಪ್ಯೂಟರ್ ಲ್ಯಾಬ್ ಹಾಗೂ ವಿಶಾಲ ಗ್ರಂಥಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ಮಕ್ಕಳ ಸುರಕ್ಷತೆ ಮತ್ತು ಶಾಲೆಯ ಶಿಸ್ತು ಕಾಪಾಡಲು ಬರೋಬ್ಬರಿ 65 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

6 / 6

ಶೈಕ್ಷಣಿಕ ಸಾಧನೆಯಲ್ಲೂ ಘೋಡಂಪಳ್ಳಿ ಅಟಲ್ ವಸತಿ ಶಾಲೆ ಗಮನ ಸೆಳೆಯುತ್ತಿದೆ. ಪ್ರತಿವರ್ಷ ಶೇ.100ರಷ್ಟು ಫಲಿತಾಂಶ ದಾಖಲಿಸುತ್ತಿರುವ ಶಾಲೆಯ ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಯಲ್ಲೂ ಮಿಂಚುತ್ತಿದ್ದಾರೆ. ಪ್ರತಿವರ್ಷ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿರುವುದು ಶಾಲೆಯ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ.

ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us