
‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್ ಬಾಸ್’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

ಮಾರ್ಚ್ 9ರಿಂದ ದಿವ್ಯಾ ಸುರೇಶ್ ಅವರ ಭಾಗದ ಶೂಟಿಂಗ್ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.
Published On - 6:39 pm, Sat, 5 March 22