ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಒಟಿಟಿಗೆ ಎಂಟ್ರಿ ನೀಡಿದ್ದಾರೆ.
ದಿನದ 24 ಗಂಟೆ ವೂಟ್ ಆ್ಯಪ್ನಲ್ಲಿ ಲೈವ್ ವೀಕ್ಷಿಸಬಹುದು. ಇದರ ಜತೆಗೆ ನಿತ್ಯ ಏನೆಲ್ಲ ಆಯಿತು ಎಂಬುದನ್ನು ಒಂದು ಅಥವಾ ಒಂದೂವರೆ ಗಂಟೆ ಸಂಚಿಕೆ ಮೂಲಕ ಪ್ರೇಕ್ಷಕರ ಎದುರು ಇಡಲಾಗುತ್ತದೆ. ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ. ಈ ಮಧ್ಯೆ ಒಂದೊಂದಾಗಿ ಬಿಗ್ ಬಾಸ್ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗುತ್ತಿದೆ.
ಸೋನು ಶ್ರೀನಿವಾಸ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ.
ಸೋನು ಅವರ ಕೆಲ ಖಾಸಗಿ ಫೋಟೋಗಳು ಲೀಕ್ ಆಗಿದ್ದವು. ಆ ಫೋಟೋಗಳನ್ನು ತಮ್ಮದಲ್ಲ ಎಂದೇ ಅವರು ಹೇಳಿದ್ದರು.
ಇನ್ಸ್ಟಾಗ್ರಾಮ್ನಲ್ಲಿ ರೀಲ್ಸ್ ಮಾಡುವ ಮೂಲಕ ಸೋನು ಅವರು ಸಾಕಷ್ಟು ಹಿಂಬಾಲಕರನ್ನು ಹೊಂದಿದ್ದಾರೆ. ಕೆಲ ಕಿರುಚಿತ್ರಗಳಲ್ಲಿ ಸೋನು ನಟಿಸಿದ್ದಾರೆ. ಅವರಿಗೆ ಬಿಗ್ ಬಾಸ್ ಮೂಲಕ ಮತ್ತಷ್ಟು ಜನಪ್ರಿಯತೆ ಸಿಗುವ ಸಾಧ್ಯತೆ ಇದೆ.