ಬಾಯ್ಫ್ರೆಂಡ್ ಜತೆ ನಿಶ್ಚಿತಾರ್ಥ ಮಾಡಿಕೊಂಡ ‘ಬಿಂದಾಸ್’ ಹುಡುಗಿ ಹನ್ಸಿಕಾ; ಯಾರು ಈ ಸೋಹೇಲ್?
ಹನ್ಸಿಕಾ ಅವರು ಸೋಹೇಲ್ ಕತೂರಿಯಾ ಜತೆ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರದಲ್ಲಿ ಅವರು ಸೀಕ್ರೆಟ್ ಕಾಯ್ದುಕೊಂಡಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋ ಹಂಚಿಕೊಳ್ಳುವ ಮೂಲಕ ನಿಶ್ಚಿತಾರ್ಥದ ವಿಚಾರವನ್ನು ಅವರು ಅಧಿಕೃತ ಮಾಡಿದ್ದಾರೆ.
Updated on: Nov 02, 2022 | 5:02 PM

ನಟಿ ಹನ್ಸಿಕಾ ಮೋಟ್ವಾನಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದಲ್ಲಿ ಹನ್ಸಿಕಾ ನಾಯಕಿ ಆಗಿ ಮಿಂಚಿದ್ದರು. ಈಗ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಅಧಿಕೃತ ಮಾಡಿದ್ದಾರೆ.

ಹನ್ಸಿಕಾ ಅವರು ಸೋಹೇಲ್ ಕತೂರಿಯಾ ಜತೆ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರದಲ್ಲಿ ಅವರು ಸೀಕ್ರೆಟ್ ಕಾಯ್ದುಕೊಂಡಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋ ಹಂಚಿಕೊಳ್ಳುವ ಮೂಲಕ ನಿಶ್ಚಿತಾರ್ಥದ ವಿಚಾರವನ್ನು ಅವರು ಅಧಿಕೃತ ಮಾಡಿದ್ದಾರೆ.

ಹನ್ಸಿಕಾ ಹಾಗೂ ಸೋಹೇಲ್ ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಇವರು ಅನೇಕ ಕಡೆಗಳಲ್ಲಿ ಒಟ್ಟಾಗಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ.

2019ರಲ್ಲಿ ತೆರೆಗೆ ಬಂದ ‘ತೆನಾಲಿ ರಾಮಕೃಷ್ಣ ಬಿಎ. ಬಿಎಲ್’ ಹನ್ಸಿಕಾ ಅವರ ಕೊನೆಯ ಚಿತ್ರ. ಕೊವಿಡ್ನಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಹೀಗಾಗಿ, ಕಳೆದ ಮೂರು ವರ್ಷಗಳಲ್ಲಿ ಅವರ ಯಾವ ಚಿತ್ರವೂ ರಿಲೀಸ್ ಆಗಿಲ್ಲ.

ಸದ್ಯ ಹನ್ಸಿಕಾ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮುಂದಿನ ವರ್ಷ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗಲಿವೆ.