AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2026: ವೇಟ್‌ಲಿಫ್ಟಿಂಗ್‌ನಲ್ಲೇ ಭಾರತಕ್ಕೆ 5ನೇ ಪದಕ; ಕಂಚು ಗೆದ್ದ ಬಿಂದಿಯಾರಾಣಿ

Commonwealth Games 2026: 2026 ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬಿಂದಿಯಾರಾಣಿ ದೇವಿ 58 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಆರನೇ ಪದಕವಾಗಿದೆ. ಬಿಂದಿಯಾರಾಣಿ 199 ಕೆಜಿ ಎತ್ತುವ ಮೂಲಕ ಈ ಸಾಧನೆ ಮಾಡಿದರು. ಈ ಮೂಲಕ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಪ್ರಾಬಲ್ಯ ಮುಂದುವರಿದಿದ್ದು, ಆಸ್ಟ್ರೇಲಿಯಾ ನಂತರ ಭಾರತ ಎರಡನೇ ಅತ್ಯಂತ ಯಶಸ್ವಿ ರಾಷ್ಟ್ರವಾಗಿದೆ. ಅವರು ಈ ಹಿಂದೆ ಅನೇಕ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಪೃಥ್ವಿಶಂಕರ
|

Updated on: Jul 27, 2026 | 10:49 PM

Share
2026 ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಆರನೇ ಪದಕ ಲಭಿಸಿದೆ. ವೇಟ್‌ಲಿಫ್ಟಿಂಗ್‌ನಲ್ಲಿ ಬಿಂದಿಯಾರಾಣಿ ದೇವಿ 58 ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಸ್ನ್ಯಾಚ್ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ ಒಟ್ಟು 199 ಕೆಜಿ ಎತ್ತುವ ಮೂಲಕ ಬಿಂದಿಯಾರಾಣಿ ಪದಕವನ್ನು ಖಚಿತಪಡಿಸಿದರು. ಇದಕ್ಕೂ ಮೊದಲು, ಅವರು ಬರ್ಮಿಂಗ್ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು(PC-PTI).

1 / 5
ಇದು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಲಭಿಸಿದ ಐದನೇ ಪದಕವಾಗಿದೆ. ಬಿಂದಿಯಾರಾಣಿ ದೇವಿ ಅವರಿಗೂ ಮೊದಲು ಜ್ಞಾನೇಶ್ವರಿ ಯಾದವ್ 53 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ, ಮೀರಾಬಾಯಿ ಚಾನು ಚಿನ್ನದ ಪದಕ, ರಿಷಿಕಾಂತ ಸಿಂಗ್ ಚಾನ್‌ಬಮ್ ಬೆಳ್ಳಿ ಪದಕ, ರಾಜ ಮುತ್ತುಪಾಂಡಿ ಬೆಳ್ಳಿ ಪದಕ, ಝಂಡು ಕುಮಾರ್ ಕಂಚಿನ ಪದಕ ಗೆದ್ದಿದ್ದರು(PC-PTI).

2 / 5
58 ಕೆಜಿ ವಿಭಾಗದಲ್ಲಿ ಬಿಂದಿಯಾರಾಣಿ ದೇವಿ ಸ್ನ್ಯಾಚ್‌ನಲ್ಲಿ 86 ಕೆಜಿ ತೂಕ ಎತ್ತಿದರೆ, ಕ್ಲೀನ್ ಮತ್ತು ಜರ್ಕ್‌ನಲ್ಲಿ 113 ಕೆಜಿ ತೂಕ ಎತ್ತುವ ಮೂಲಕ ಒಟ್ಟು 199 ಕೆಜಿ ತೂಕ ಎತ್ತುವ ಮೂಲಕ ಕಂಚಿನ ಪದಕವನ್ನು ತನ್ನದಾಗಿಸಿಕೊಂಡರು. ಇದಕ್ಕೂ ಮೊದಲು ಬಿಂದಿಯಾರಾಣಿ ದೇವಿ 2022 ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಒಟ್ಟು 202 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದರು(PC-PTI).

3 / 5
ಇದಲ್ಲದೆ, ಅವರು 2023 ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ, IWF ವಿಶ್ವಕಪ್ (2024) ನಲ್ಲಿ ಕಂಚಿನ ಪದಕ ಮತ್ತು 2025 ರ ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. 55 ಕೆಜಿ ತೂಕ ವಿಭಾಗದಲ್ಲಿ ಸ್ನ್ಯಾಚ್ ವಿಭಾಗದಲ್ಲಿ 88 ಕೆಜಿ ಎತ್ತುವ ಮೂಲಕ ಅವರು ರಾಷ್ಟ್ರೀಯ ದಾಖಲೆಯನ್ನು ಹೊಂದಿದ್ದಾರೆ(PC-PTI).

4 / 5
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ವೇಟ್‌ಲಿಫ್ಟರ್‌ಗಳು ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಸ್ಟ್ರೇಲಿಯಾದ ನಂತರ ಭಾರತವು ವೇಟ್‌ಲಿಫ್ಟಿಂಗ್‌ನಲ್ಲಿ ಎರಡನೇ ಅತ್ಯಂತ ಯಶಸ್ವಿ ರಾಷ್ಟ್ರವಾಗಿದ್ದು, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಇದುವರೆಗೆ 46 ಚಿನ್ನ ಸೇರಿದಂತೆ 134 ಪದಕಗಳನ್ನು ಗೆದ್ದಿದೆ(PC-PTI).

5 / 5
Follow Us
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ

ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್

ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ

ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು

ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು

ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ

ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ

ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ