Updated on: Jan 14, 2024 | 12:11 PM
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ.
ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಇಂದು ಈ ಘಟನೆ ನಡೆದಿದೆ.
ಅದೃಷ್ಟವಶಾತ್ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಕೇವಲ ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮತ್ತಿಮೂಡ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಪಲ್ಟಿಯಾಗಿದ್ದು, ಏಕೆ ಈ ಅವಘಡ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಆಸ್ಪತ್ರೆಯಲ್ಲಿರುವದನ್ನು ನೋಡಿ ಪತ್ನಿ ಜಯಶ್ರಿ ಕಣ್ಣೀರಿಟ್ಟಿದ್ದಾರೆ.