Updated on:Dec 28, 2023 | 11:12 AM
ಪ್ರಸ್ತುತ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯಗಳು ಹೇಗೆ ನಡೆಯುತ್ತಿದೆ ಎಂಬುದನ್ನು ರಾಷ್ಟ್ರೀಯ ಬಿಜೆಪಿ ಪಕ್ಷ ತನ್ನ ಎಕ್ಸ್ನಲ್ಲಿ ಫೋಟೋವನ್ನು ಹಂಚಿಕೊಂಡಿದೆ.
ರಾಮಮಂದಿರ ನಿರ್ಮಾಣ ಭರದಿಂದ ಸಾಗುತ್ತಿದ್ದು, ಅನೇಕ ಕೆಲಸಗಳನ್ನು ಮುಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಈ ಚಿತ್ರಗಳನ್ನು ಹಂಚಿಕೊಂಡಿದೆ.
ಈಗಾಗಲೇ 2024 ಜನವರಿ 22ರಂದು ರಾಮ ಜನ್ಮಭೂಮಿ ಟ್ರಸ್ಟ್ ರಾಮ್ ಲಲ್ಲಾ 'ಪ್ರಾಣ ಪ್ರತಿಷ್ಠಾ' (ಪ್ರತಿಷ್ಠಾಪನೆ) ಸಮಾರಂಭದ ಸಿದ್ಧತೆಗಳನ್ನು ನಡೆಸುತ್ತಿದೆ.
ಈ ಕಾರ್ಯಕ್ರಮದಲ್ಲಿ 10 ಕೋಟಿ ಜನ ಭಾಗವಹಿಸುವ ಸಾಧ್ಯತೆ ಇದೆ. ಇದರ ಜತೆಗೆ ಅನೇಕ ಗಣ್ಯರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ನಾಲ್ಕು ಸಾವಿರಕ್ಕೂ ಹೆಚ್ಚು ಸಾಧು- ಸಂತರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ದೇಶದ ಪ್ರತಿ ಹಿಂದೂ ಮನೆಗೂ ಈ ಕಾರ್ಯಕ್ರಮದ ಆಹ್ವಾನ ಪತ್ರ ತಲುಪುವ ಕೆಲಸವನ್ನು ಆರ್ಎಸ್ಎಸ್ ಮಾ
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಸಮಾರಂಭ ನಡೆಯಲಿದೆ. ಇದರ ಜತೆಗೆ ಉತ್ತರ ಪ್ರದೇಶ ಸರ್ಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯು ಪ್ರತಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಮಂಡಳಿಯ ಸಹಾಯದಿಂದ ಅನೇಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುತ್ತದೆ.
Published On - 2:27 pm, Fri, 8 December 23