
ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ. ಈ ಚಿತ್ರದ ಮೂಲಕ ಅನನ್ಯಾ ಜನಪ್ರಿಯತೆ ಹೆಚ್ಚಿದೆ.

ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಅವರು ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ‘ಲೈಗರ್’ ಸಿನಿಮಾ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ರಿಲೀಸ್ ಆಗಿದೆ.

ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಹಲವು ಆಫರ್ಗಳು ಸುಲಭವಾಗಿ ಸಿಗುತ್ತಿವೆ. ಆದರೂ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ನಿಲ್ಲಲು ಕಷ್ಟಪಡುತ್ತಿದ್ದಾರೆ.

‘ಲೈಗರ್’ ಸಿನಿಮಾದಿಂದ ಅನನ್ಯಾ ಪಾಂಡೆ ಅವರು ಜನಪ್ರಿಯತೆ ಹೆಚ್ಚಿದೆ. ಆದರೂ ಕೂಡ ಅವರಿಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ.

ಕರಣ್ ಜೋಹರ್ ಅವರ ಬಳಗದಲ್ಲಿ ಅನನ್ಯಾ ಪಾಂಡೆ ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಕ್ರಿಯವಾಗಿದ್ದು, ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.