
ಸಿಎಂ ಸಿದ್ದರಾಮಯ್ಯ ಹಾಗೂ ಬಾಲಿವುಡ್ ನಟ ಆಮಿರ್ ಖಾನ್ ಅವರು ದೆಹಲಿಯಲ್ಲಿ ಆಕಸ್ಮಿಕವಾಗಿ ಭೇಟಿ ಆಗಿದ್ದು, ಪರಸ್ಪರ ಕುಶಲೋಪರಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಅದೇ ವೇಳೆ ಆಮೀರ್ ಖಾನ್ ಅವರು ಸಹ ಅಲ್ಲಿಯೇ ಹಾಜರಿದ್ದರು.

ಆಮಿರ್ ಖಾನ್ ಹಾಗೂ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಆಗಿ ಪರಸ್ಪರ ಹಸ್ತಲಾಘವದ ಬಳಿಕ ಕೆಲ ಸಮಯ ಮಾತುಕತೆ ಆಡಿದ್ದಾರೆ.

ಆಮಿರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಆಮಿರ್ ಖಾನ್, ಸಿದ್ದರಾಮಯ್ಯ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಮಿರ್ ಖಾನ್ ಅವರ ಸಿನಿಮಾಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ. ‘ಸಿತಾರೆ ಜಮೀನ್ ಪರ್’ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ವಿಶೇಷ ಚೇತನ ವ್ಯಕ್ತಿಗಳ ಬಗೆಗೆ ಜಾಗೃತಿ ಮೂಡಿಸುವ ಸಿನಿಮಾ ಇದಾಗಿದೆ.