Brinda Acharya: ಗೆದ್ದು ಬೀಗಿದ ‘ಕೌಸಲ್ಯ ಸುಪ್ರಜಾ ರಾಮ’ ಸುಂದರಿ ಬೃಂದಾ ಆಚಾರ್ಯ
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.
Updated on: Jul 29, 2023 | 9:40 AM

ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಕ್ಯೂಟ್ ಲುಕ್ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



