- Kannada News Photo gallery British Prime Minister Rishi Sunak celebrated Diwali with the Hindu community, here is a photo
ಹಿಂದೂ ಸಮುದಾಯದೊಂದಿಗೆ ದೀಪಾವಳಿ ಆಚರಿಸಿಕೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಇಲ್ಲಿದೆ ಫೋಟೋ
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಲಂಡನ್ನಲ್ಲಿ ಹಿಂದೂ ಸಮುದಾಯದವರು ಆಯೋಜಿಸಿದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Updated on:Nov 09, 2023 | 11:00 AM

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಲಂಡನ್ನಲ್ಲಿ ಹಿಂದೂ ಸಮುದಾಯದವರು ಆಯೋಜಿಸಿದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಡೌನಿಂಗ್ ಸ್ಟ್ರೀಟ್ ಹಿಂದೂ ಸಮುದಾಯದವರು ದೀಪಾವಳಿಗೂ ಮುಂಚಿತವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇದು ಕತ್ತಲೆಯ ಮೇಲೆ ಬೆಳಕಿನ ವಿಜಯೋತ್ಸವದ ಆಚರಣೆಯಾಗಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ಈ ಕಾರ್ಯಕ್ರಮವನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಫೋನ್ ಮೂಲಕ ಮಾತನಾಡಿದ್ದಾರೆ.

ಉಭಯ ದೇಶಗಳು ಮುಕ್ತ ವ್ಯಾಪರ ಹಾಗೂ ಅನೇಕ ಒಪ್ಪಂದಗಳ ಬಗ್ಗೆ ಮಾತನಾಡಿದ್ದಾರೆ. ಇನ್ನು ಬ್ರಿಟನ್ ಮತ್ತು ಭಾರತದ ಸ್ನೇಹವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಮಾತನಾಡಿದ್ದಾರೆ.

ಮುಂದಿನ ವರ್ಷ ಜನವರಿಯಲ್ಲಿ ಭಾರತದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಬ್ರಿಟನ್ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ.

ಇನ್ನು ಭಾರತದಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ ಕುರಿತು ಇಬ್ಬರು ನಾಯಕರುಗಳು ಕೂಡ ಚರ್ಚಿಸಿದ್ದಾರೆ.
Published On - 10:59 am, Thu, 9 November 23

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.
Read More




