
ಭಾರತೀಯ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಒಂದು. ಈ ಈರುಳ್ಳಿಯನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿ ಈರುಳ್ಳಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು. ಹಾಗಾದ್ರೆ ಮಧುಮೇಹ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಹುದಾ ಎಂದು ಈಗ ತಿಳಿದುಕೊಳ್ಳೋಣ.

ಮಧುಮೇಹ ಸಮಸ್ಯೆ ಇರುವವರಿಗೆ ಈರುಳ್ಳಿ ತುಂಬಾ ಒಳ್ಳೆಯದು. ಪ್ರತಿದಿನ ಈರುಳ್ಳಿಯನ್ನು ಸೇವಿಸುವುದರಿಂದ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಈರುಳ್ಳಿ ಸಹಾಯ ಮಾಡುತ್ತದೆ. ಇದು ಅನೇಕ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ.

ಈರುಳ್ಳಿ ರಸವು ಸುಟ್ಟಗಾಯಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಸುಟ್ಟ ಜಾಗಕ್ಕೆ ಈರುಳ್ಳಿ ರಸವನ್ನು ಹಚ್ಚುವುದರಿಂದ ಗುಳ್ಳೆಗಳು ಬರದಂತೆ ತಡೆಯುತ್ತದೆ. ಈರುಳ್ಳಿ ರಸವು ಸುಟ್ಟಗಾಯಗಳಿಗೆ ಸೋಂಕು ತಗುಲುವುದನ್ನು ತಡೆಯುತ್ತದೆ.

ಮೂಳೆಗಳು ದುರ್ಬಲವಾಗಿದ್ದರೆ ಹಸಿ ಈರುಳ್ಳಿಯನ್ನು ತಿನ್ನಬಹುದು. ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಈರುಳ್ಳಿಯನ್ನು ಸಲಾಡ್ ರೂಪದಲ್ಲಿ ತೆಗೆದುಕೊಳ್ಳಬಹುದು