Canada Open: ಕ್ವಾರ್ಟರ್ ಫೈನಲ್‌ಗೆ ಎಂಟ್ರಿಕೊಟ್ಟ ಪಿವಿ ಸಿಂಧು, ಲಕ್ಷ್ಯ ಸೇನ್..!

Updated on: Jul 07, 2023 | 12:30 PM

Canada Open: ಕೆನಡಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ ಸಿಂಗಲ್ಸ್ ಸ್ಪರ್ಧೆಗಳಲ್ಲಿ ಕ್ವಾರ್ಟರ್ ಫೈನಲ್‌ಗೆ ಎಂಟ್ರಿಕೊಟ್ಟಿದ್ದಾರೆ.

1 / 5
ಕೆನಡಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ ಸಿಂಗಲ್ಸ್ ಸ್ಪರ್ಧೆಗಳಲ್ಲಿ ಕ್ವಾರ್ಟರ್ ಫೈನಲ್‌ಗೆ ಎಂಟ್ರಿಕೊಟ್ಟಿದ್ದಾರೆ.

2 / 5
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಸಿಂಧು ಅವರು ತಮ್ಮ ಫ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಪಾನ್​ನ ನಟ್ಸುಕಿ ನಿಡೈರಾ ಅವರನ್ನು ಎದುರಿಸಲು ಸಜ್ಜಾಗಿದ್ದರು. ಆದರೆ ನಟ್ಸುಕಿ ನಿಡೈರಾ ಪಂದ್ಯದಿಂದ ಹಿಂದೆ ಸರಿದಿದ್ದರಿಂದಾಗಿ ಸಿಂಧು ವಾಕ್ ಓವರ್ ಪಡೆದು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

3 / 5
ಇದೀಗ ಕೊನೆಯ ಎಂಟರ ಘಟಕ್ಕೆ ಟಿಕೆಟ್ ಖಚಿತ ಪಡಿಸಿಕೊಂಡಿರುವ ಸಿಂಧು, ಈ ವರ್ಷ ಏಷ್ಯಾ ಮಿಶ್ರ ತಂಡ ಚಾಂಪಿಯನ್‌ಶಿಪ್‌ನಲ್ಲಿ ಚೀನಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ 2022 ರ ಇಂಡೋನೇಷ್ಯಾ ಮಾಸ್ಟರ್ಸ್ ಚಾಂಪಿಯನ್ ಗಾವೊ ಫಾಂಗ್ ಜೀ ಅವರನ್ನು ಎದುರಿಸಲಿದ್ದಾರೆ.

4 / 5
ಇನ್ನು ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ಲಕ್ಷ್ಯ ಸೇನ್ ಇಂದು ಮುಂಜಾನೆ 21-15, 21-11 ಸೆಟ್‌ಗಳಿಂದ ಬ್ರೆಜಿಲ್‌ನ ಯೊಗೊರ್ ಕೊಯೆಲೊ ಅವರನ್ನು ಸೋಲಿಸುವ ಮೂಲಕ ಕ್ವಾರ್ಟರ್ ಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ.

5 / 5
ಇದೀಗ ಲಕ್ಷ್ಯ ಸೇನ್ ತಮ್ಮ ಮುಂದಿನ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್ ಕರಾಗ್ಗಿ ಅವರನ್ನು ಎದುರಿಸಲಿದ್ದಾರೆ.

Published On - 12:29 pm, Fri, 7 July 23