AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Betting: ಬೆಂಗಳೂರಿನಲ್ಲಿ ಐಪಿಎಲ್​ ಕ್ರಿಕೆಟ್​ ಬೆಟ್ಟಿಂಗ್, 160 ಆರೋಪಿಗಳ ಸಹಿತ 60 ಲಕ್ಷ ವಶಕ್ಕೆ

ಐಪಿಎಲ್ ಪಂದ್ಯಾವಳಿ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ಇದೇ ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟಿ ದಂಧೆ ನಡೆಸುತ್ತಿದ್ದ ಜಾಲ ಪತ್ತೆಯಾಗಿದೆ.

Rakesh Nayak Manchi
Rakesh Nayak Manchi|

Updated on:Apr 25, 2023 | 5:48 PM

Share
CCB police arrests 160 accused in IPL cricket betting racket in Bengaluru news

ಬೆಂಗಳೂರು: ಐಪಿಎಲ್ ಪಂದ್ಯಾವಳಿ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ಇದೇ ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟಿ ದಂಧೆ ನಡೆಸುತ್ತಿದ್ದ ಜಾಲ ಪತ್ತೆಯಾಗಿದೆ. ಐಪಿಎಲ್​ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಸಂಬಂಧ 30ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡ ಸಿಸಿಬಿ ಪೊಲೀಸರು 160 ಮಂದಿಯನ್ನು ಬಂಧಿಸಿ 62 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ.

1 / 6
CCB police arrests 160 accused in IPL cricket betting racket in Bengaluru news

ಬೆಟ್ಟಿಂಗ್ ದಂಧೆ ಸಂಬಂಧ ನಗರದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಹಲವು ಗ್ಯಾಂಬ್ಲರ್​​ಗಳ ಮೇಲೆ ಸಿಸಿಬಿ ಪೊಲೀಸರು ನಿಗಾ ಇಟ್ಟಿದ್ದಾರೆ. ಐಪಿಎಲ್ ಪಂದ್ಯ ನಡೆಯುವ ದಿನ ಆನ್​ಲೈನ್ ಮತ್ತು ವಿವಿಧ ಆ್ಯಪ್​ಗಳ ಮೂಲಕ ಲಕ್ಷ ಲಕ್ಷ ಬೆಟ್ಟಿಂಗ್ ಕಟ್ಟುತ್ತಿದ್ದರು. ದಂಧೆಕೋರರು ಬಾಲ್ ಟು ಬಾಲ್ ಬೆಟ್ಟಿಂಗ್ ಕಟ್ಟುತ್ತಿದ್ದರು.

2 / 6
CCB police arrests 160 accused in IPL cricket betting racket in Bengaluru news

ಈ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ವಿವಿಧ ಠಾಣೆಗಳಲ್ಲಿ ಒಟ್ಟು 35 ಪ್ರಕರಣಗಳನ್ನು ದಾಖಲಿಸಿ ತನಿಖೆಗೆ ಆರಂಭಿಸಿದ್ದರು. ಅದರಂತೆ ದಂಧೆಯಲ್ಲಿ ತೊಡಗಿದ್ದ 160 ಮಂದಿಯ ಸಹಿತ ಬೆಟ್ಟಿಂಗ್​ಗೆ ಬಳಕೆ ಮಾಡಿದ್ದ 62 ಲಕ್ಷ ರೂ. ನಗದನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಇನ್ನೂ ಹಲವು ಗ್ಯಾಂಬ್ಲರ್​​ಗಳ ಮೇಲೆ ನಿಗಾ ಇಡಲಾಗಿದೆ.

3 / 6
CCB police arrests 160 accused in IPL cricket betting racket in Bengaluru news

ಇತ್ತೀಚೆಗಷ್ಟೇ ಮೈದಾನದಲ್ಲೇ ಕೂತು ಸೆಕೆಂಡ್ ಲೆಕ್ಕದಲ್ಲಿ ಬೆಟ್ಟಿಂಗ್ ಮಾಡುತ್ತಿದ್ದ ನಾಲ್ವರಿದ್ದ ಗ್ಯಾಂಗ್‌ ಒಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ದೇಶದ ಯಾವುದೇ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಲ್ಲಿಗೆ ಈ ಗ್ಯಾಂಗ್ ಹೋಗುತ್ತಿತ್ತು. ಮೈದಾನದಲ್ಲೇ ಕೂತು ಕೋಟ್ಯಾಂತರ ರೂಪಾಯಿ ಅಕ್ರಮವಾಗಿ ಸಂಪಾದಿಸುತ್ತಿದ್ದರು.

4 / 6
CCB police arrests 160 accused in IPL cricket betting racket in Bengaluru news

ಪಂದ್ಯದ ಸಮಯದಲ್ಲಿ ಈ ಗ್ಯಾಂಗ್​ನ ಒಂದು ಬ್ಯಾಚ್ ಮೈದಾನದ ಒಳಗೆ ಹೋದರೆ ಇನ್ನೊಂದು ಬ್ಯಾಚ್ ಪ್ರತಿ ಬಾಲ್​​ಗೂ ಹೊರಗಡೆ ಬೆಟ್ಟಿಂಗ್ ನಡೆಸುತ್ತಿತ್ತು. ಕ್ರೀಡಾಂಗಣದಲ್ಲಿ ಕುಳಿತಿದ್ದ ಗ್ಯಾಂಗ್​ನ ದಂಧೆಕೋರರು ಕಳುಹಿಸುವ ಮಾಹಿತಿ ಆಧರಿಸಿ ಹೊರಗಿರುವ ಮತ್ತೊಂದು ಗ್ಯಾಂಗ್ ಟಿವಿ ನೋಡಿಕೊಂಡು ಬೆಟ್ಟಿಂಗ್ ಹಾಕುತ್ತಿತ್ತು.

5 / 6
CCB police arrests 160 accused in IPL cricket betting racket in Bengaluru news

ಗ್ರೌಂಡ್ ಲೆವೆಲ್ ಮ್ಯಾಚ್​ಗೂ ಟಿವಿಯ ಲೈವ್ ಮ್ಯಾಚ್​ಗೂ 10 ಸೆಕೆಂಡಿನ ಅಂತರವಿದೆ. ಈ ಅಂತರವನ್ನೇ ತಮ್ಮ ಅನುಕೂಲಕ್ಕೆ ಮಾಡಿಕೊಂಡು ಹಲವೆಡೆ ಆರೋಪಿಗಳು ವಂಚನೆ ಮಾಡಿರುವುದು ತನಿಖೆ ವೇಳೆ ಬಯಲಿಗೆ ಬಂದಿತ್ತು.

6 / 6

Published On - 4:58 pm, Tue, 25 April 23

Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​