- TV9 Kannada Photo gallery CCB Police Raid on Bengaluru Central Jail Parappana Agrahara, Bengaluru News in Kannada
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ತಲಾಶ್, ಫೋಟೋಸ್ ನೋಡಿ
ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶನಿವಾರ ದಿಢೀರನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಧಿಕಾರಿಗಳು ಜೈಲಿನ ಎಲ್ಲ ಬ್ಯಾರಕ್ಗಳನ್ನು ತಪಾಸಣೆ ನಡೆಸಿದರು. ದಾಳಿ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ ಹಲವು ವಿಚಾರ ನಡೆಸಿದರು.
Updated on: Aug 24, 2024 | 2:55 PM

ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶನಿವಾರ ದಿಢೀರನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇಂದು (ಆ.24) ಬೆಳಂಬೆಳಗ್ಗೆ ಶ್ವಾನ ದಳ ಸಮೇತವಾಗಿ ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಜೈಲಿನ ಎಲ್ಲ ಬ್ಯಾರಕ್ಗಳನ್ನು ತಪಾಸಣೆ ನಡೆಸಿದರು.

ನಟೋರಿಯಸ್ ರೌಡಿ ಸುನೀಲ್, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಹಲವು ರೌಡಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರೌಡಿಗಳು ಮೊಬೈಲ್ ಮೂಲಕ ಹೊರಗಡೆ ಸಂಪರ್ಕ ಸಾಧಿಸಿ, ಇಲ್ಲಿ ದುಷ್ಕೃತ್ಯ ಎಸಗುತ್ತಿರವ ಸಿಸಿಬಿಗೆ ಮಾಹಿತಿ ದೊರೆತಿತ್ತು.

ಈ ಹಿನ್ನಲೆಯಲ್ಲಿ ಇಂದು ಸಿಸಿಬಿ ಅಧಿಕಾರಿಗಳು ಮೊಬೈಲ್, ವೆಪನ್, ಮಾದಕ ಪದಾರ್ಥ ಸೇರಿದಂತೆ ಹಲವು ವಸ್ತುಗಳ ಪತ್ತೆಗೆ ಶೋಧ ಕಾರ್ಯ ನಡೆಸಿದರು. ಆದರೆ, ಜೈಲಿನಲ್ಲಿ ಮೊಬೈಲ್ ಸೇರಿದಂತೆ ಯಾವುದೇ ನಿಷೇಧಿತ ವಸ್ತು ಪತ್ತೆಯಾಗಿಲ್ಲ.

ದಾಳಿ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಇದುವರೆಗೂ ಮೊಬೈಲ್ ಸೇರಿದಂತೆ ನಿಷೇಧಿತ ವಸ್ತು ಪತ್ತೆಯಾಗಿಲ್ಲ. ಜೈಲಿನ ಎಲ್ಲ ಬ್ಯಾರಕ್ಗಳನ್ನು ಸಂಪೂರ್ಣ ಶೋಧ ನಡೆಸಲಾಗಿದೆ. ಸಿಸಿಬಿ ಪೊಲೀಸರ ತಂಡ ತಲಾಶ್ ನಡೆಸುತ್ತಿದೆ. ಪರಪ್ಪನ ಅಗ್ರಹಾರ ಜೈಲಿನ ವಿಐಪಿ ಸೆಲ್ಗಳಲ್ಲೂ ಶೋಧ ನಡೆಸುತ್ತಿದ್ದಾರೆ ಎಂದು ಹೇಳಿದರು.

ಪರಪ್ಪನ ಅಗ್ರಹಾರ ಜೈಲಿನೊಳಗೆ ಗನ್, ಬುಲೆಟ್, ಗಾಂಜಾ ಪೂರೈಕೆಯಾಗುತ್ತಿದೆ ಎಂದು ನ್ಯಾಯಾಲಯದ ಮುಂದೆ ಆರೋಪ ಮಾಡಲಾಗಿತ್ತು. ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದ ಹೈಕೋರ್ಟ್ ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.
Read More



