Army Chopper Crash: ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ; ಲಭ್ಯ ವಿವರಗಳು ಇಲ್ಲಿದೆ
TV9 Web | Updated By: ganapathi bhat
Updated on:
Dec 08, 2021 | 2:35 PM
Army Helicopter Crash in Ooty: ಸಿಡಿಎಸ್ ಬಿಪಿನ್ ರಾವತ್ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.
1 / 6
ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ವೊಂದು ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿದೆ. ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 9 ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಕೂಡ ಇದ್ದರು ಎಂದು ಹೇಳಲಾಗಿದೆ.
2 / 6
ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದೆ. ಸಿಡಿಎಸ್ ಬಿಪಿನ್ ರಾವತ್ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಇನ್ನು ಹೆಲಿಕಾಪ್ಟರ್ನಲ್ಲಿ 9 ಜನರಿದ್ದು, ಮೂವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
3 / 6
ವಾಯುಪಡೆಯ Mi-17V5 ಹೆಲಿಕಾಪ್ಟರ್ ಪತನ ಹಿನ್ನೆಲೆ, ಘಟನೆಯ ಬಗ್ಗೆ ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ, ಈ ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿ ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.
4 / 6
ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಇದೀಗ, ಬಿಪಿನ್ ರಾವತ್‌ರನ್ನು ಆಸ್ಪತ್ರೆಗೆ ಕರೆದೊಯ್ದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಿಪಿನ್ ರಾವತ್ ಸೇರಿದಂತೆ ನಾಲ್ವರು ಆಸ್ಪತ್ರೆಗೆ ದಾಖಲು ಆಗಿದ್ದಾರೆ, ನಾಲ್ವರು ಅಧಿಕಾರಿಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
5 / 6
ಕೊಯಂಬತ್ತೂರಿನ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
6 / 6
ಸಿಕ್ಕ ನಾಲ್ಕು ಮೃತದೇಹದಲ್ಲಿ ಇಬ್ಬರು ಶೇ.80ರಷ್ಟು ಸುಟ್ಟುಹೋಗಿದ್ದಾರೆ. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.