- Kannada News Photo gallery Central drought study team inspects Nelamangala: Officials hold discussions with farmers
ಕೇಂದ್ರ ಬರ ಅಧ್ಯಯನ ತಂಡದಿಂದ ನೆಲಮಂಗಲದಲ್ಲಿ ಪರಿಶೀಲನೆ: ರೈತರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ನೆಲಮಂಗಲ ತಾಲೂಕಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
Updated on:Oct 08, 2023 | 6:30 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ನೆಲಮಂಗಲ ತಾಲೂಕಿನಲ್ಲಿ ಪರಿಶೀಲನೆ ಮಾಡಿದ್ದಾರೆ.

ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ನೆಲಮಂಗಲದ ಸೀರಗಾನಹಳ್ಳಿ ಹಾಗೂ ಕುಲುವೆನಹಳ್ಳಿಯ ರೈತರ ಜಮೀನಿನಲ್ಲಿ ರಾಗಿ ಬೆಳೆ ಹಾನಿಯನ್ನು ವೀಕ್ಷಿಸಿದ್ದಾರೆ. ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡಿದ್ದಾರೆ.

ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದ್ದಾರೆ.

ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ವಿ, ಎಂ.ಎನ್.ಸಿ.ಎಫ್.ಸಿ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ಅವರಿಂದ ಬರ ಪರಶೀಲನೆ ಮಾಡಲಾಗಿದೆ.
Published On - 6:29 pm, Sun, 8 October 23



