ಹೀಗೂ ಒಂದು ಹಬ್ಬವಿದೆ ನೋಡಿ: ಇಲ್ಲಿ ಸೆಗಣಿಯಲ್ಲಿ ಹೊರಳಾಡಿ, ಅದರಿಂದಲೇ ಹೊಡೆದಾಡಿಕೊಳ್ಳುತ್ತಾರೆ ಜನ!

ಚಾಮರಾಜನಗರ ಜಿಲ್ಲೆಯ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ಆಚರಿಸುವ ಗೊರೆ ಹಬ್ಬವು ಅನನ್ಯ ಸಂಪ್ರದಾಯವಾಗಿದೆ. ಸಗಣಿಯಲ್ಲಿ ಹೊರಳಾಡುವುದು ಮತ್ತು ಒಬ್ಬರಿಗೊಬ್ಬರು ಹೊಡೆದಾಡುವುದು ಈ ಹಬ್ಬದ ಮುಖ್ಯ ಆಕರ್ಷಣೆ. ಈ ಹಬ್ಬವು ಸಮಾನತೆ ಮತ್ತು ಏಕತೆಯನ್ನು ಸಂಕೇತಿಸುತ್ತದೆ. ಸಗಣಿಯಾಟದ ಹಿಂದೆ ಧಾರ್ಮಿಕ ನಂಬಿಕೆಗಳೂ ಇವೆ. ಈ ಹಬ್ಬವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ

Updated on:Nov 04, 2024 | 12:19 PM

ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ತಪ್ಪದೆ ಗೊರೆ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ.

1 / 11
ಅಚ್ಚ ಕನ್ನಡಿಗರೆ ಇರುವ ಗುಮಟಾಪುರ ರಾಜ್ಯ ಪುನರ್ ವಿಂಗಡೆಣೆ ಸಂದರ್ಭದಲ್ಲಿ ತಮಿಳುನಾಡಿಗೆ ಸೇರಿಹೋದ ಗ್ರಾಮ. ಪ್ರತಿವರ್ಷ ಇಲ್ಲಿ ಬಲಿಪಾಡ್ಯಮಿಯ ಮರುದಿನ ದಿನ ಗೊರೆ ಹಬ್ಬ ಆಚರಿಸಲಾಗುತ್ತದೆ. ವಯಸ್ಸು ಹಾಗೂ ಜಾತಿ ಬೇಧಬಾವವಿಲ್ಲದೆ ಗ್ರಾಮದ ಜನರೆಲ್ಲ ಸೇರಿ ಸಗಣಿಯಲ್ಲಿ ಹೊರಳಾಡಿ, ಒಬ್ಬರಿಗೊಬ್ಬರು ಹೊಡೆದಾಡುವುದು ಗೊರೆ ಹಬ್ಬದ ವಿಶೇಷ.

2 / 11
ಸಗಣಿ ಅಂದ್ರೆ ಮಾರು ದೂರು ಹೋಗುವವರೇ ಹೆಚ್ಚು. ಆದರೆ ಇಲ್ಲಿನ ಜನ ಸಗಣಿಯಲ್ಲೇ ಬಿದ್ದು ಹೊರಳಾಡ್ತಾರೆ. ಅಷ್ಟಕ್ಕೂ ಈ ಹಬ್ಬದ ಆಚರಣೆ ಹೇಗಿರುತ್ತೆ ಅಂದ್ರೆ, ಹಬ್ಬದ ದಿನ ಬೆಳಿಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ ಗಾಡಿ ಹಾಗು ಟ್ಯ್ರಾಕ್ಟರ್​ಗಳ ಮೂಲಕ ತಂದು ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ರಾಶಿ ಹಾಕಲಾಗುತ್ತದೆ.

3 / 11
ಇದಾದ ನಂತರ ಗ್ರಾಮದ ಹೊಳೆ ದಂಡೆಗೆ ಹೋಗಿ ಇಬ್ಬರು ವ್ಯಕ್ತಿಗಳಿಗೆ ಹುಲ್ಲಿನ ಮೀಸೆ ಗಡ್ಡವನ್ನು ಕಟ್ಟಿ ಹಣೆಗೆ ನಾಮ ಬಳಿದು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಊರ ತುಂಬೆಲ್ಲಾ ಮೆರವಣಿಗೆ ಮಾಡಲಾಗುತ್ತದೆ. ಹೀಗೆ ಕತ್ತೆಯ ಮೇಲೆ ಕುಳ್ಳರಿಸಿ ಮೆರವಣಿಗೆ ಮಾಡುವವರನ್ನು ಕೊಂಡಕಾರರು ಎನ್ನಲಾಗುತ್ತದೆ.

4 / 11
ಕೊಂಡಕಾರ ಎಂದರೆ ಸುಳ್ಳುಗಾರ, ಚಾಡಿಕೋರ ಎಂದರ್ಥ. ಹಿಂದೆ ಸುಳ್ಳು ಹೇಳುವ ವ್ಯಕ್ತಿ ಗ್ರಾಮದ ಜನರಲ್ಲಿ ದ್ವೇಷಾಸೂಯೆ ಮೂಡಿಸಿ ಅಶಾಂತಿಗೆ ಕಾರಣವಾಗಿದ್ದ ಎನ್ನಲಾಗಿದೆ. ಅಂತಹ ವ್ಯಕ್ತಿಗಳಿಗೆ  ಯಾವ ರೀತಿ ಶಿಕ್ಷೆ ನೀಡಲಾಗುತ್ತಿತ್ತು ಎಂಬುದರ ಸಂಕೇತವಾಗಿ  ಇಬ್ಬರಿಗೆ ಚಾಡಿಕೋರರ ವೇಷ ಧರಿಸಿ ಕತ್ತೆಯ ಮೇಲೆ ಮೆರವಣಿಗೆ ನಡೆಸಲಾಗುತ್ತದೆ.

5 / 11
ಸುಳ್ಳುಗಾರರ ಮೆರವಣಿಗೆ ಬಳಿಕ ಸಗಣಿ ರಾಶಿ ಬಳಿ ಗ್ರಾಮದ ಜನ ಜಮಾಯಿಸುತ್ತಾರೆ. ಆಗ ನೋಡಿ ಶುರುವಾಗುತ್ತೆ ಸಗಣಿಯಾಟ. ಸಗಣಿ ರಾಶಿಯಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೆ ಹೊಡೆದಾಡುತ್ತಾರೆ. ದೊಡ್ಡ ದೊಡ್ಡ ಸಗಣಿ ಮುದ್ದೆಗಳನ್ನು ಮಾಡಿ ಒಬ್ಬರ ಮೇಲೆ ಒಬ್ಬರು ಸಗಣಿ ಮುದ್ದೆಗಳನ್ನು ಎತ್ತಿ ಹಾಕಿ ಖುಷಿಪಡುತ್ತಾರೆ.

6 / 11
ನಿಜಕ್ಕೂ ಸಗಣಿಯ ದೊಡ್ಡ ದೊಡ್ಡ ಮುದ್ದೆಗಳನ್ನು ಕಟ್ಟುವ ರೀತಿ, ಅದನ್ನು ಪ್ರಾಯಸದಿಂದ ಮೇಲಕ್ಕೆತ್ತಿ ಮತ್ತೊಬ್ಬರ ಮೇಲೆ ಎತ್ತಿ ಹಾಕುವ ದೃಶ್ಯ ನಿಜಕ್ಕೂ ಎಂತಹವರಲ್ಲು ನಗೆ ತರಿಸುತ್ತದೆ. ಸುಮಾರು ಎರಡು ಗಂಟೆಗಳ ಕಾಲ ನಡೆಯುವ ಈ ಸಗಣಿಯಾಟವನ್ನು ನೋಡಲು ಸುತ್ತ-ಮುತ್ತಲಿನ ಗ್ರಾಮಸ್ಥರು  ಜಮಾಯಿಸುತ್ತಾರೆ. ಸುತ್ತಲೂ ನೆರೆಯುವ ಜನರ ಮುಗಿಲು ಮುಟ್ಟುವ ಕಿರುಚಾಟ, ಘೋಷಣೆಗಳು ಗೊರೆ ಕಟ್ಟುವವರ ಉತ್ಸಾಹವನ್ನು ಹಿಮ್ಮಡಿಗೊಳಿಸುತ್ತದೆ.

7 / 11
ಸಗಣಿಯಿಂದ ಹೊಡೆದಾಡಿದರೆ ಚರ್ಮದ ಕಾಯಿಲೆಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇದೆ. ಬೀರೇಶ್ವರನಿಗೆ ಹರಕೆ ಹೊತ್ತವರು ಸಹ ಇದರಲ್ಲಿ ಪಾಲ್ಗೊಳ್ಳುತ್ತಾರೆ. ಇದರಿಂದ ತಮ್ಮ ಮನದ ಬಯಕೆ ಈಡೇರುತ್ತದೆ ಎಂಬ ನಂಬಿಕೆಯೂ ಇದೆ. ಈ ಹಬ್ಬ ಆಚರಿಸಲು ಒಂದು ಹಿನ್ನಲೆಯು ಇದೆ.

8 / 11
ಹಿಂದೆ ಊರ ಗೌಡರ ಮನೆಯಲ್ಲಿ ಜೀತಕ್ಕಿದ್ದ ವ್ಯಕ್ತಿ ಮಹಾ ಶಿವಭಕ್ತನಾಗಿದ್ದನಂತೆ. ಆತನ ಮರಣ ನಂತರ ಆತನ ವಿಭೂತಿ, ರುದ್ರಾಕ್ಷಿ ಹಾಗೂ ಜೋಳಿಗೆಯನ್ನು ತಿಪ್ಪೆಗೆ ಎಸೆಯಲಾಗಿತ್ತಂತೆ. ಕಾಲಾನಂತರ ಗೊಬ್ಬರಕ್ಕಾಗಿ ತಿಪ್ಪೆ ಅಗೆಯುತ್ತಿದ್ದಾಗ ಆ ಸ್ಥಳದಲ್ಲಿ ಲಿಂಗವೊಂದು ಉದ್ಭವವಾಗಿರುವುದು ಗೋಚರಿಸಿತು ಎಂಬ ನಂಬಿಕೆಯಿದೆ. ನಂತರ ಅದೇ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿ ಅಂದಿನಿಂದ ಪ್ರತಿ ವರ್ಷ ಇಲ್ಲಿ ಸಗಣಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ.

9 / 11
ಸಗಣಿ ಹಬ್ಬದ ವಿಶೇಷತೆ ಅರಿತ ಜರ್ಮನಿ ಹಾಗು ಹಂಗೇರಿಯ ಎಂಟು ಮಂದಿ ಪ್ರಜೆಗಳು ಸಗಣಿ ಹಬ್ಬ ವೀಕ್ಷಿಸಲು ಗುಮಟಾಪುರಕ್ಕೆ ಆಗಮಿಸಿದ್ದರು. ಇಬ್ಬರು ಜರ್ಮನ್ ಪ್ರಜೆಗಳು ಸ್ವತಃ ಸಗಣಿಯಾಟ ಆಡಿ ಸಂಭ್ರಮಿಸಿದರು

10 / 11
ಹೀಗೆ ಪ್ರತಿ ವರ್ಷ ತಪ್ಪದೆ ಗೊರೆಹಬ್ಬ ಮಾಡುವುದರಿಂದ ಗ್ರಾಮದಲ್ಲಿ ಶಾಂತಿ ನೆಲೆಸುತ್ತದೆ. ಮಳೆ-ಬೆಳೆ ಚೆನ್ನಾಗಿ ಆಗುತ್ತದೆ ಎಂಬ ನಂಬಿಕೆ ಇದೆ. ಮೇಲುನೋಟಕ್ಕೆ ವಿಚಿತ್ರ ಸಂಪ್ರದಾಯದಂತೆ ಕಂಡು ಬರುವ ಈ ಆಚರಣೆಯ ಹಿಂದೆ ಧಾರ್ಮಿಕ ನಂಬಿಕೆ ಇದೆ. ಅಲ್ಲದೆ ಈ ಗೊರೆಹಬ್ಬ ಸಮಾನತೆ ಜಾತ್ಯಾತೀತತೆ ಹಾಗು ಒಗ್ಗಟ್ಟಿನ ಪ್ರತೀಕವಾಗಿದೆ. ಒಟ್ಟಾರೆ ಸಗಣಿಯೆಂದರೆ ಅಸಹ್ಯ ಪಟ್ಟುಕೊಳ್ಳದೆ ಅದರಲ್ಲೆ ದೇವರನ್ನು ಕಾಣುವ ಈ ಹಬ್ಬ ನಿಜಕ್ಕು ವೈಶಿಷ್ಠ್ಯ ಪೂರ್ಣವಾಗಿದೆ.

11 / 11

Published On - 8:07 am, Mon, 4 November 24

Follow us
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP

ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ

6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​

ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?

ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು