AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋಲ್ಡ್​ ಫ್ಯಾಕ್ಟರಿ’ ತೋರಿಸಿದ ಚಂದನ್​ ಶೆಟ್ಟಿ-ಸುಜಯ್​ ಶಾಸ್ತ್ರಿ; ಹೇಗಿದೆ ಹೊಸ ಸಾಂಗ್​?

ಚಂದನ್​ ಶೆಟ್ಟಿ ನಟನೆ, ಸುಜಯ್​ ಶಾಸ್ತ್ರಿ ನಿರ್ದೇಶನದ ‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಸಾಂಗ್​ ಇಷ್ಟ ಆಗಿದೆ.

TV9 Web
| Edited By: |

Updated on:Aug 10, 2022 | 3:04 PM

Share
‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾದಲ್ಲಿ ಚಂದನ್​ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಅರ್ಚನಾ ಕೊಟ್ಟಿಗೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಸುಜಯ್​ ಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ. ಉಷಾ ಗೋವಿಂದರಾಜು ನಿರ್ಮಾಣ ಮಾಡಿದ್ದಾರೆ.

Chandan Shetty starrer Elra Kaaleliyatte Kaala movie first song Gold Factory released

1 / 5
ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಸುಜಯ್ ಶಾಸ್ತ್ರಿ, ಚಂದನ್ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕ ಪ್ರವೀಣ್-ಪ್ರದೀಪ್, ಮಂಜು ಪಾವಗಡ ಮುಂತಾದವರು ಹಾಜರಿದ್ದರು.

Chandan Shetty starrer Elra Kaaleliyatte Kaala movie first song Gold Factory released

2 / 5
‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

3 / 5
‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್​ ಶಾಸ್ತ್ರಿ.

4 / 5
ಈ ಸಿನಿಮಾದ ಶೂಟಿಂಗ್​ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.

5 / 5

Published On - 3:04 pm, Wed, 10 August 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!