Updated on:Aug 10, 2022 | 3:04 PM
Chandan Shetty starrer Elra Kaaleliyatte Kaala movie first song Gold Factory released
‘ನಮ್ಮ ಚಿತ್ರದ ಮೊದಲ ಹಾಡು ಇದು. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿಬಂದಿದೆ. ಇದೊಂದು ವಿಭಿನ್ನವಾದ ಪ್ರಯತ್ನ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ’ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.
‘ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ ನಿರ್ದೇಶಕ ಸುಜಯ್ ಶಾಸ್ತ್ರಿ.
ಈ ಸಿನಿಮಾದ ಶೂಟಿಂಗ್ ಮುಗಿದಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಂದು ಕಾಮಿಡಿ ಸಿನಿಮಾದಲ್ಲಿ ನಟಿಸಿದ ಖುಷಿಯಲ್ಲಿದ್ದಾರೆ ನಾಯಕಿ ಅರ್ಚನಾ.
Published On - 3:04 pm, Wed, 10 August 22