
ಈಶಾನ್ಯ ಮುಂಗಾರು ಇನ್ನಷ್ಟು ಚುರುಕುಗೊಳ್ಳುವ ಸಾಧ್ಯತೆಯಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 5ರವರೆಗೆ ಭಾರೀ ಮಳೆಯಾಗಲಿದೆ.

ಚೆನ್ನೈನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕಳೆದ 30 ವರ್ಷಗಳಲ್ಲೇ ದಾಖಲೆಯ ಮಳೆಯಾಗಿದೆ. ಚೆನ್ನೈನಲ್ಲಿ ಮಂಗಳವಾರ 8.4 ಸೆಂ.ಮೀ ಮಳೆ ದಾಖಲಾಗಿದೆ.

ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ದಾಖಲೆಯ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಳೆದ 75 ವರ್ಷಗಳಲ್ಲೇ ತಮಿಳುನಾಡಿನಲ್ಲಿ ದಾಖಲೆಯ ಮಳೆಯಾಗಿದೆ.

ತಮಿಳುನಾಡಿನ ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಳೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸಲು ರಾಜ್ಯದ ಸಚಿವರು ಮತ್ತು ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು.

ಪಾದಚಾರಿಗಳು ಓಡಾಡದಂತಹ ಪರಿಸ್ಥಿತಿ ಉಂಟಾಗಿದೆ. ಮನೆಗಳು ಕುಸಿಯುತ್ತಿದ್ದು, ಜನವಸತಿ ಪ್ರದೇಶಕ್ಕೂ ಕೂಡ ನೀರು ನುಗ್ಗಿ ಜನರು ಪರದಾಡುವಂತಾಗಿದೆ.

ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈ ಮತ್ತು ಅದರ ಹೊರವಲಯದಲ್ಲಿ ಜನರು ಜಲಾವೃತಗೊಂಡ ಬೀದಿಗಳಲ್ಲಿ ಸಂಚರಿಸಲು ಪರದಾಡಿದರು.

ಮುಂದಿನ 24 ಗಂಟೆಗಳಲ್ಲಿ ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್ ಮತ್ತು ತಿರುವನಾಮಲೈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಚೆನ್ನೈನ ಹಲವೆಡೆ ಚಂಡಮಾರುತ ಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಗರದ ಬಹುತೇಕ ಪ್ರದೇಶಗಳಲ್ಲಿ ಮುಳುಗಡೆಯಾಗಿದೆ.

ನವೆಂಬರ್ 5ರವರೆಗೆ ತಮಿಳುನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ, ಆಂಧ್ರಪ್ರದೇಶದ ರಾಯಲಸೀಮಾ, ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

47 ವರ್ಷದ ಮಹಿಳೆ ಶಾಂತಿ ತನ್ನ ಮನೆಯ ಬಾಲ್ಕನಿ ಮೇಲೆ ಬಿದ್ದಿದ್ದರಿಂದ ಸಾವನ್ನಪ್ಪಿದ್ದಾರೆ. 52 ವರ್ಷದ ಆಟೋರಿಕ್ಷಾ ಚಾಲಕ ದೇವೇಂದ್ರನ್ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.